ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಸ್ಥಿತಿ ಗಂಭೀರ, ಕೃತಕ ಉಸಿರಾಟ ವ್ಯವಸ್ಥೆ: ಏಮ್ಸ್

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸ್ಥಿತಿ ಗಂಭೀರವಾಗಿದ್ದು...
ಏಮ್ಸ್
ಏಮ್ಸ್
ನವದೆಹಲಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಮಂಗಳವಾರ ದೆಹಲಿ ಏಮ್ಸ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ವಕೀಲ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಲಖನೌನ ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ಇಬ್ಬರು ಗಾಯಾಳುಗಳನ್ನು ನಿನ್ನೆ ದೆಹಲಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಗಾಯಾಳುಗಳನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲು ದೆಹಲಿ ಪೊಲೀಸರು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏಮ್ಸ್ ವರೆಗೆ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿದ್ದರು.
ಕಳೆದ ಭಾನುವಾರ ಅತ್ಯಾಚಾರ ಸಂತ್ರಸ್ತೆಯ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಇಬ್ಬರು ಮೃತಪಟ್ಟಿದ್ದು, ಸಂತ್ರಸ್ತೆ ಹಾಗೂ ಆಕೆಯ ವಕೀಲ ಗಂಭೀರವಾಗಿ ಗಾಯಗೊಂಡಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಆಕೆಯ ಕುಟುಂಬ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com