ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶದಲ್ಲಿ ಭಾರಿ ಮಳೆ ಸಾಧ್ಯತೆ; ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಆಂಧ್ರ ಪ್ರದೇಶದ ಶ್ರೀಕಾಕುಳಂ, ವಿಜ್ಯಾನಗರಂ, ವಿಶಾಖಪಟ್ಟಣಂ, ಪೂರ್ವ ಗೋದಾವರಿ, ಕರಾವಳಿ ಪಶ್ಚಿಮ ಗೋದಾವರಿ ಮತ್ತು...

Published: 07th August 2019 12:00 PM  |   Last Updated: 07th August 2019 04:32 AM   |  A+A-


Heavy rainfall warning for Andhra Pradesh, Telangana

ಸಾಂದರ್ಭಿಕ ಚಿತ್ರ

Posted By : LSB LSB
Source : UNI
ಹೈದರಾಬಾದ್: ಮುಂದಿನ 24 ಗಂಟೆಗಳಲ್ಲಿ ಆಂಧ್ರ ಪ್ರದೇಶದ ಶ್ರೀಕಾಕುಳಂ, ವಿಜ್ಯಾನಗರಂ, ವಿಶಾಖಪಟ್ಟಣಂ, ಪೂರ್ವ ಗೋದಾವರಿ, ಕರಾವಳಿ ಪಶ್ಚಿಮ ಗೋದಾವರಿ ಮತ್ತು ಯಾನಮ್ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬುಧವಾರ ಎಚ್ಚರಿಸಿದೆ.

ಮುಂದಿನ 48 ಗಂಟೆಗಳಲ್ಲಿ ತೆಲಂಗಾಣದ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಮುಂದಿನ ಐದು ದಿನಗಳಲ್ಲಿ ತೆಲಂಗಾಣ, ಆಂಧ್ರ ಪ್ರದೇಶ ಕರಾವಳಿ, ಯಾನಮ್ ಮತ್ತು ರಾಯಲಸೀಮಾದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ತೆಲಂಗಾಣ, ಕರಾವಳಿ ಆಂಧ್ರಪ್ರದೇಶ, ಯಾನಂನಲ್ಲಿ ಭಾರಿ ವರ್ಷಧಾರೆಯಾಗಿದೆ ಮತ್ತು ರಾಯಲಸೀಮಾದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ನೈಋತ್ಯ ಮುಂಗಾರು ಪ್ರಬಲವಾಗಿದ್ದು, ಇದರ ಪ್ರಭಾವದಿಂದ, ಜಯಶಂಕರ್ ಭೂಪಾಲಪಲ್ಲಿ, ನಿರ್ಮಲ್, ಭದ್ರಾಡ್ರಿ ಕೊಥಗುಡೆಮ್ ಮತ್ತು ನಿಜಾಮಬಾದ್ ನ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp