ಕಾಶ್ಮೀರದಲ್ಲಿರುವ ಮಕ್ಕಳು-ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕವಾಗುತ್ತಿದೆ: ಮಲಾಲಾ ಟ್ವೀಟ್

ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ...
ಮಲಾಲಾ ಯುಸೂಫಾಜಿ
ಮಲಾಲಾ ಯುಸೂಫಾಜಿ
ನವದೆಹಲಿ: ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಆತಂಕ ಎದುರಾಗಿದೆ ಎಂದು ನೊಬೆಲ್ ಪುರಸ್ಕೃತೆ ಮಲಾಲಾ ಯುಸೂಫಾಜಿ ಟ್ವೀಟ್ ಮಾಡಿದ್ದಾರೆ,
ನನ್ನ ತಾತ, ನನ್ನ ತಂದೆ ತಾಯಿ ಹಾಗೂ ನಾನು ಬಾಲ್ಯದಲ್ಲಿದ್ದಾಗಿಂದಲೂ ಕಾಶ್ಮೀರದ ಜನತೆ ಸಂಘರ್ಷದಲ್ಲಿಯೇ ಬದುಕುತಿದ್ದಾರೆ,  ಹೀಗಾಗಿ ಇಂದು ನನಗೆ ಕಾಶ್ಮೀರದ ಮಹಿಳೆ ಮತ್ತು ಮಕ್ಕಳ ಬಗ್ಗೆ ಚಿಂತೆಯಾಗುತ್ತಿದೆ, ಮತ್ತಷ್ಟು ಹಿಂಸಾಚಾರ ಹೆಚ್ಚುವ ಸಾಧ್ಯತೆಯಿದೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ  ನೀಡಿದ್ದ ವಿಶೇಷಾಧಿಕಾರಿ ಆರ್ಟಿಕಲ್ 370ನೇ ವಿಧಿಯನ್ನು  ರದ್ದುಗೊಳಿಸಿದ್ದರ ಹಿನ್ನೆಲೆಯಲ್ಲಿ  ಮಲಾಲಾ ಯೂಸೂಫ್ ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com