ಆರ್ಟಿಕಲ್ 370 ರದ್ದು ವಿರೋಧಿಸಿ 'ಸುಪ್ರೀಂ'ಗೆ ಮೊದಲ ಅರ್ಜಿ: ತುರ್ತು ವಿಚಾರಣೆಗೆ ನಕಾರ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಣಯವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೊದಲ ಅರ್ಜಿ ದಾಖಲಾಗಿದ್ದು ಈ ಸಂಬಂಧ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಣಯವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೊದಲ ಅರ್ಜಿ ದಾಖಲಾಗಿದ್ದು ಈ ಸಂಬಂಧ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದೆ. 
ವಕೀಲರಾದ ಎಂಎಲ್ ಶರ್ಮಾ ಎಂಬುವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಆಗಸ್ಟ್ 12 ಅಥವಾ 13ರಂದು ಅರ್ಜಿಯ ವಿಚಾರಣೆ ನಡೆಸಿ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಇದಕ್ಕೆ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ತುರ್ತು ವಿಚಾರಣೆಗೆ ನಿರಾಕರಿಸಿದೆ.
ಭಾರತ ಪ್ರಜಾಪ್ರಭುತ್ವ ದೇಶ. ಸಂವಿದಾನದ ಪರಿಚ್ಛೇದ ತಿದ್ದುಪಡಿಗೆ ಸಂಸತ್ ಮಾರ್ಗ ಬಳಸಬಾರದು. 370ನೇ ವಿಧಿ ರದ್ದುಗೊಳಿಸಲು ಕೇಂದ್ರ ಸರ್ಕಾರ ಸಂಸತ್ ಮಾರ್ಗ ಬಳಸಿದ್ದೇಗೆ ಸರಿ?. ರಾಷ್ಟ್ರಪತಿಗಳ ಪರಮಾಧಿಕಾರ ದುರುಪಯೋಗ ಮಾಡಿಕೊಳ್ಳುವ ಮುಖೇನ ಕೇಂದ್ರ ಸರ್ಕಾರ ಕಣಿವೆ ರಾಜ್ಯದ ಅಧಿಕಾರ ಕಿತ್ತುಕೊಂಡಿದೆ. ಈ ಆದೇಶ ಕೂಡಲೇ ರದ್ದುಗೊಳಿಸಿ ತೀರ್ಪು ನೀಡಬೇಕೆಂದು ಎಂಎಲ್ ಶರ್ಮಾ ಮನವಿ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com