ನೂತನ ಸಂಸತ್​ ಭವನ ನಿರ್ಮಾಣಕ್ಕೆ ಚಿಂತನೆ: ಲೋಕಸಭೆ ಸ್ಪೀಕರ್​ ಓಂ ಬಿರ್ಲಾ

ನೂತನ ಸಂಸತ್​ ಭವನವನ್ನು ನಿರ್ಮಾಣಕ್ಕೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ,  ಆದರೆ ಈ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ತಿಳಿಸಿದ್ದಾರೆ.
ಲೋಕಸಭೆ ಸ್ಪೀಕರ್​ ಓಂ ಬಿರ್ಲಾ
ಲೋಕಸಭೆ ಸ್ಪೀಕರ್​ ಓಂ ಬಿರ್ಲಾ

ನವದೆಹಲಿ: ನೂತನ ಸಂಸತ್​ ಭವನವನ್ನು ನಿರ್ಮಾಣಕ್ಕೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ,  ಆದರೆ ಈ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ತಿಳಿಸಿದ್ದಾರೆ.

ಬಹಳ ದಿನಗಳಿಂದ ನೂತನ ಸಂಸತ್ ಭವನ ನಿರ್ಮಾಣದ ಕುರಿತು ಸುದ್ದಿಗಳು ಕೇಳಿಬರುತ್ತಿತ್ತಾದರೂ, ಈ ಕುರಿತಂತೆ ಅಧಿಕೃತ ಹೇಳಿಕೆಗಳು ಹೊರ ಬಿದ್ದಿರಲಿಲ್ಲ. ಇದೀಗ ಇದೇ ಮೊದಲ ಬಾರಿ ಎಂಬಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದ್ದು, ಶೀಘ್ರ ಈ ಕುರಿತು ನಿರ್ಣಯ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಓಂ ಬಿರ್ಲಾ, 'ನೂತನ ಸಂಸತ್​ ಭವನದ ಅವಶ್ಯಕತೆ ಇರುವುದು ಕಂಡು ಬಂದಿದೆ. ಹಾಗಾಗಿ ತಜ್ಞರು, ಸಂಸದರು ಅಭಿಪ್ರಾಯ ಸಂಗ್ರಹಿಸಲು ಹಲವು ತಂಡಗಳನ್ನು ರಚಿಸಲಾಗಿದೆ. ಇವರು ನೀಡುವ ವರದಿ ಆಧರಿಸಿ ಆಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಂತೆಯೇ ಈಗಿರುವ ಸಂಸತ್​ ಭವನವನ್ನೇ ನವೀಕರಿಸುವ ಕುರಿತೂ ಚಿಂತಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ನವಭಾರತ ಯೋಜನೆಯಲ್ಲಿ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸಂಸತ್​ ಭವನದ ನವೀಕರಣ ಅಥವಾ ವಿಸ್ತರಣೆ ಮಾಡುವ ಕುರಿತು ಚಿಂತಿಸಬೇಕು ಎಂದು ಬಿರ್ಲಾ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com