ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು: ರಾಹುಲ್ ಗಾಂಧಿ

ಸಂವಿಧಾನದ ವಿಧಿ 370ರದ್ಧತಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗಟ್ಟಿದ್ದು, ಈ ಕುರಿತಂತೆ ಮೋದಿ ಸರ್ಕಾರ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ
ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ

ನವದೆಹಲಿ: ಸಂವಿಧಾನದ ವಿಧಿ 370ರದ್ಧತಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗಟ್ಟಿದ್ದು, ಈ ಕುರಿತಂತೆ ಮೋದಿ ಸರ್ಕಾರ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, 'ಜಮ್ಮು ಕಾಶ್ಮೀರದ ಪರಿಸ್ಥಿತಿ ಹದಗೆಟ್ಟಿದ್ದು ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಸ್ಪಷ್ಟೀಕರಣ ನೀಡಬೇಕು ಎಂದು ಹೇಳಿದರು.

'ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಈ ವಿಚಾರದ ಬಗ್ಗೆ ನಾಯಕರಿಗೆ ಸುದ್ದಿ ಸಿಕ್ಕಿದೆ. ಹೀಗಾಗಿ ತಕ್ಷಣ ನನಗೆ ಮಾಹಿತಿ ನೀಡಿದ್ದಾರೆ. ಈ ವಿಚಾರದ ಚರ್ಚೆಯಲ್ಲಿ ನಾನೂ ಭಾಗಿಯಾಗಿದ್ದೇನೆ. ಕೇಂದ್ರ ಸರ್ಕಾರ ಕೂಡಲೇ ಜಮ್ಮು ಕಾಶ್ಮೀರದ ಪರಿಸ್ಥಿತಿ ಕುರಿತು ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

ಇದೇ ವೇಳೆ ಕಾಂಗ್ರೆಸ್‌ ಸಭೆಯಲ್ಲಿ ಅಧ್ಯಕ್ಷ ಸ್ಥಾನದ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಸದ್ಯಕ್ಕೆ ಈ ವಿಚಾರದ ಚರ್ಚೆ ಮುಂದೂಡಲಾಗಿದೆ. ಕಾಶ್ಮೀರದಲ್ಲಿ ಹಿಂಸಾಚಾರವಾಗಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರು ಚರ್ಚಿಸಲೆಂದು ತುರ್ತಾಗಿ ಬರುವಂತೆ ಹೇಳಿದ್ದಾರೆ. ಹೀಗಾಗಿ ಬಂದಿದ್ದೇನೆ ಎಂದು ಹೇಳಿದರು. ಸಭೆಯಲ್ಲಿ ಜಮ್ಮು ಕಾಶ್ಮೀರದ ಕುರಿತು ಮಾಹಿತಿ ಸಿಕ್ಕ ತಕ್ಷಣವೇ, ಅಧ್ಯಕ್ಷ ಸ್ಥಾನದ ಚರ್ಚೆಯಲ್ಲಿ ಬದಿಗಿರಿಸಲಾಗಿದೆ ಎಂದು ರಾಹುಲ್‌ ತಿಳಿಸಿದರು.  

ಪ್ರಧಾನಿ ಮೋದಿ ಜಮ್ಮು ಕಾಶ್ಮೀರದಲ್ಲಿ ಆಗಿದೆ ಎನ್ನಲಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಾರದರ್ಶಕ ಮಾಹಿತಿ ನೀಡಬೇಕು ಎಂದೂ ಅವರು ಆಗ್ರಹಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com