ನಾನು ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ಇಲ್ಲ: ಸಿಡಬ್ಲ್ಯುಸಿ ಸಭೆ ಬಳಿಕ ಗೆಹ್ಲೋಟ್

ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ನಾನು ಇಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ನಾನು ಇಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅಶೋಕ್ ಗೆಹ್ಲೋಟ್ ಅವರು, ಪಕ್ಷದ ಅಧ್ಯಕ್ಷ ಹುದ್ದೆ ಆಕಾಂಕ್ಷಿಗಳ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ. ನನ್ನ ಈ ಅಭಿಪ್ರಾಯ ಎಲ್ಲರಿಗೂ ತಿಳಿದಿದೆ ಎಂದರು.

ನೂತನ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಸಿಡಬ್ಲ್ಯುಸಿ ಇಂದು ಸಂಜೆ ಮತ್ತೊಂದು ಸುತ್ತಿನ ಸಭೆ ನಡೆಸಲಿದೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಈ ಮಧ್ಯೆ, ಮುಂದಿನ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ತಾವು ತಲೆ ಹಾಕದಿರಲು ಕಾಂಗ್ರೆಸ್‌ ವರಿಷ್ಠ ನಾಯಕರಾದ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿಯವರು ನಿರ್ಧರಿಸಿದ್ದಾರೆ. ಅಲ್ಲದೆ ಇಂದು ನಡೆದ ಸಿಡಬ್ಲ್ಯುಸಿ ಸಭೆಯಿಂದ ದೂರು ಉಳಿದಿದ್ದಾರೆ.

ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ವಿಚಾರವನ್ನು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಮತ್ತು ಎಲ್ಲ ರಾಜ್ಯಗಳ ಪ್ರಾದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಿಗೆ ಬಿಟ್ಟುಬಿಟ್ಟಿದ್ದಾರೆ.

ಇಂದು ರಾತ್ರಿ 8.30ಕ್ಕೆ ಸಿಡಬ್ಲುಸಿ ಮತ್ತೆ ಸಭೆ ಸೇರಲಿದ್ದು, ಕಾಂಗ್ರೆಸ್ ನೂತನ ಅಧ್ಯಕ್ಷರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ನಡೆದ ಸಿಡಬ್ಲ್ಯೂ ಸಿ ಸಭೆಯಲ್ಲಿ ಐದು ಗುಂಪುಗಳನ್ನು ರಚಿಸಿ, ಅಧ್ಯಕ್ಷರ ಆಯ್ಕೆಗೆ ಅವುಗಳ ಸಲಹೆಗಳನ್ನು ಪಡೆಯುವ ಬಗ್ಗೆ ತೀರ್ಮಾನಿಸಿತು. ಇದೊಂದು ಪ್ರಕ್ರಿಯೆಯಾಗಿದ್ದು ಇದರಲ್ಲಿ ಭಾಗಿಯಾಗದೇ ಇರಲು ರಾಹುಲ್‌ ಸೋನಿಯಾ ತೀರ್ಮಾನಿಸಿದ್ದಾರೆ ಎಂದು ಸಮಿತಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com