370ನೇ ವಿಧಿ ರದ್ದುಗೊಳಿಸಿದ ನಂತರ ಮೋದಿ, ಅಮಿತ್ ಶಾ ಪೂಜಿಸುತ್ತಿದ್ದೇನೆ: ಶಿವರಾಜ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸುವ ಮೂಲಕ ದೇಶದ ಮೊದಲ ಪ್ರಧಾನಿ...
ಶಿವರಾಜ್ ಸಿಂಗ್ ಚೌಹಾಣ್ - ಪ್ರಧಾನಿ ಮೋದಿ - ಅಮಿತ್ ಶಾ
ಶಿವರಾಜ್ ಸಿಂಗ್ ಚೌಹಾಣ್ - ಪ್ರಧಾನಿ ಮೋದಿ - ಅಮಿತ್ ಶಾ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸುವ ಮೂಲಕ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಮಾಡಿದ್ದ ಐತಿಹಾಸಿಕ ತಪ್ಪನ್ನು ಸರಿಪಡಿಸಿದ್ದಾರೆ ಎಂದು ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ.

370ನೇ ವಿಧಿ ರದ್ದುಗೊಳಿಸಿದ ಬಳಿಕ ನಾನು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಪೂಜೆ ಮಾಡಲು ಆರಂಭಿಸಿದ್ದೇನೆ ಎಂದು ಚೌಹಾಣ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಇದುವರೆಗೆ ನನ್ನ ನಾಯಕರಾಗಿದ್ದರು. ಆದರೆ ಈಗ ಅವರು ದೇವರಾಗಿದ್ದು, ನಾನು ಅವರನ್ನು ಪೂಜಿಸುತ್ತೇನೆ ಎಂದು ಚೌಹಾಣ್ ಹೇಳಿದ್ದಾರೆ.

ಈ ಮುಂಚೆ ಜಮ್ಮು ಕಾಶ್ಮೀರ ಸಮಸ್ಯೆಗೆ ನೆಹರೂ ಅವರೇ ಕಾರಣ ಎಂದು ಆರೋಪಿಸಿದ್ದ ಮಾಜಿ ಸಿಎಂ, ದೇಶದ ಮೊದಲ ಪ್ರಧಾನಿ ಒಬ್ಬ ಅಪರಾಧಿ. ಅವರು ಕದನ ವಿರಾಮ ಘೋಷಿಸದಿದ್ದರೆ ಈಡೀ ಕಾಶ್ಮೀರ ನಮ್ಮದಾಗಿರುತ್ತಿತ್ತು ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com