ಕೇರಳ ಪ್ರವಾಹ: ಸಾವಿನ ಸಂಖ್ಯೆ 72ಕ್ಕೆ ಏರಿಕೆ, ಇನ್ನೂ 58 ಮಂದಿ ನಾಪತ್ತೆ

ಕೇರಳದಲ್ಲಿ ಸಂಭವಿಸಿರುವ ಭಾರಿ ಮಳೆ ಮತ್ತು ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಅಂತೆಯೇ ಈ ವರೆಗೂ ನಾಪತ್ತೆಯಾದವರ ಸಂಖ್ಯೆಯೂ 58ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

Published: 12th August 2019 12:00 AM  |   Last Updated: 12th August 2019 04:25 PM   |  A+A-


Posted By : Vishwanath S
Source : ANI

ಕೊಚ್ಚಿ: ಕೇರಳದಲ್ಲಿ ಸಂಭವಿಸಿರುವ ಭಾರಿ ಮಳೆ ಮತ್ತು ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಅಂತೆಯೇ ಈ ವರೆಗೂ ನಾಪತ್ತೆಯಾದವರ ಸಂಖ್ಯೆಯೂ 58ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಹಾಲಿ ವರ್ಷದ ಪ್ರವಾಹದಲ್ಲಿ ಕೇರಳದ ಮಲಪ್ಪುರಂ ಹೆಚ್ಚು ಹಾನಿಗೀಡಾಗಿದ್ದು, ಈ ಜಿಲ್ಲೆಯೊಂದರಲ್ಲೇ 11 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ 50 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿನ ಕವಲಪ್ಪರ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲೇ 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. 

ಇನ್ನು ವಯನಾಡಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ನಾನು ಕೂಡ ಕವಲಪ್ಪರಗೆ ಭೇಟಿ ನೀಡಿದ್ದು, ಇಲ್ಲಿನ ಭೂತಾನಂನಲ್ಲಿ ಭೂಕುಸಿತ ಸಂಭವಿಸಿದೆ. ಹಲವು ಮಂದಿ ಇಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿದ್ದುಸ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಆದರೂ ಹೆಚ್ಚಿನ ನೆರವು ಬೇಕಿದೆ ಎಂದು ಹೇಳಿದ್ದಾರೆ.

ಕೇರಳ ಮಾತ್ರವಲ್ಲದೇ ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲೂ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, 30ಕ್ಕೂ ಹೆಚ್ಚು ಜಿಲ್ಲೆಗಳು ಪ್ರವಾಹದಲ್ಲಿ ಮುಳುಗಡೆಯಾಗಿವೆ. ಎನ್ ಡಿಆರ್ ಎಫ್ ನ ವಿವಿಧ ತಂಡಗಳು, ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp