ಜಮ್ಮು ಮತ್ತು ಕಾಶ್ಮೀರ, ಲಡಾಖ್ ಅಭಿವೃದ್ಧಿಗೆ ಸಹಾಯ: ಮುಕೇಶ್ ಅಂಬಾನಿ

ಶೀಘ್ರದಲ್ಲೇ ನೂತನ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಘೋಷಿಸುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಅವರು ಸೋಮವಾರ ಹೇಳಿದ್ದಾರೆ.
ಮುಕೇಶ್ ಅಂಬಾನಿ
ಮುಕೇಶ್ ಅಂಬಾನಿ

ಮುಂಬೈ: ಶೀಘ್ರದಲ್ಲೇ ನೂತನ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಘೋಷಿಸುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಅವರು ಸೋಮವಾರ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಖಾಸಗಿ ಕಂಪನಿಗಳು ಹೂಡಿಕೆ ಮಾಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಮನವಿಗೆ ಸ್ಪಂದಿಸಿದ ಮುಕೇಶ್ ಅಂಬಾನಿ ಅವರು, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಜನರ ಅಗತ್ಯಗಳಿಗೆ ನಾವು ಬದ್ಧರಾಗಿದ್ದೇವೆ. ಮುಂದಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ಗಾಗಿ ನಾವು ಹಲವಾರು ಘೋಷಣೆಗಳನ್ನು ಮಾಡಲಿದ್ದೇವೆ ಎಂದರು. 

ಇಂದು ಕಂಪನಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಗಾಗಿ ವಿಶೇಷ ಕಾರ್ಯಪಡೆಯೊಂದನ್ನು ರಚಿಸುವುದಾಗಿ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ದಿಗಾಗಿ ದೇಶದ ಜನರು ಮುಂದೆ ಬರಬೇಕು ಮತ್ತು ಭಯೋತ್ಪಾದನೆಯನ್ನು ಕೊನೆಗೊಳಿಸಬೇಕು ಎಂದು ಅವರು ಹೇಳಿದ್ದರು. ಅಲ್ಲದೆ ಕಣಿವೆ ರಾಜ್ಯದಲ್ಲಿ ಕಂಪನಿಗಳು ಹೂಡಿಕೆ ಮಾಡಬೇಕು ಎಂದು ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com