ರಾಜ್ಯಸಭೆಗೆ ಆಯ್ಕೆ ಬಯಸಿ ರಾಜಸ್ತಾನದಿಂದ ಮನಮೋಹನ್ ಸಿಂಗ್ ನಾಮಪತ್ರ

ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ ಮುಖಂಡ ಮನಮೋಹನ್ ಸಿಂಗ್ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆ ಬಯಸಿ ರಾಜಸ್ತಾನದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ಮನಮೋಹನ್ ಸಿಂಗ್ ಹಾಗೂ ಇತರೆ ನಾಯಕರು
ಮನಮೋಹನ್ ಸಿಂಗ್ ಹಾಗೂ ಇತರೆ ನಾಯಕರು

ಜೈಪುರ: ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ ಮುಖಂಡ ಮನಮೋಹನ್ ಸಿಂಗ್ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆ ಬಯಸಿ ರಾಜಸ್ತಾನದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ಕಳದೆ ಜೂನ್‌ನಲ್ಲಿ ಬಿಜೆಪಿಯ ಮದನ್ ಲಾಲ್ ಸೈನಿ ಸಾವನ್ನಪ್ಪಿದ್ದರಿಂದ ತೆರವಾಗಿದ್ದ  ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಪಕ್ಷದ ಇತರ ಹಿರಿಯ ನಾಯಕರು ಈ ಸಮಯದಲ್ಲಿ ಹಾಜರಿದ್ದರು.

ಈ ಹಿಂದೆ ಅಸ್ಸಾಂನಿಂದ ರಾಜ್ಯಸಭಾ ಸದಸ್ಯರಾಗಿದ್ದ ಡಾ.ಮನಮೋಹನ್ ಸಿಂಗ್ ಅವರು ರಾಜ್ಯಸಭೆ ಸದಸ್ಯರಾಗಿ ಹೆಚ್ಚು ಸಮಯ ಕಳೆದಿದ್ದಾರೆ.

1991ರಲ್ಲಿ ಅಸ್ಸಾಂನಿಂದ ಚುನಾಯಿತರಾದ ನಂತರ ಆಗಿನ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಿಂಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಅವರಿಗೆ ಹೊಣೆಗಾರಿಕೆ ನೀಡಿದ್ದರು. ಅವರು ನಾಲ್ಕು ಅವಧಿಗೆ ರಾಜ್ಯಸಭೆ ಸದಸ್ಯರಾಗಿ, ಎರಡು ಬಾರಿ ಪ್ರಧಾನ ಮಂತ್ರಿಯಾಗಿದ್ದರು. 

ಜೂನ್‌ನಲ್ಲಿ ಅವರ ರಾಜ್ಯಸಭೆಯ ಅವಧಿ ಕೊನೆಗೊಂಡಿತ್ತು. ಆದರೆ  ಅಸ್ಸಾಂ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಬಲ ಕಡಿಮೆಯಾದ ಕಾರಣ ಕಾಂಗ್ರೆಸ್ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಕಾಂಗ್ರೆಸ್ ಕೇವಲ 25 ಶಾಸಕರನ್ನು ಹೊಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com