ಯಾವುದೇ ಸವಾಲು ಎದುರಿಸಲು ಭಾರತೀಯ ಸೇನೆ ಸರ್ವಸನ್ನದ್ಧ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ 

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲೂ ಭಾರತೀಯ ಸೇನೆ ಸರ್ವಸನ್ನದ್ಧವಾಗಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲೂ ಭಾರತೀಯ ಸೇನೆ ಸರ್ವಸನ್ನದ್ಧವಾಗಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ವಿಧಿ 370ರನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಸೃಷ್ಟಿಯಾಗಿರುವ ಪರಿಸ್ಥಿತಿಗೆ ಸಂಬಂಧಿಸಿದಂತೆ ಸುದ್ದಿಸಂಸ್ಛೆಯೊಂದಿಗೆ ಮಾತನಾಡಿರುವ ರಾವತ್ ಅವರು, ಕಣಿವೆಯಲ್ಲಿ ಭಾರತೀಯ ಸೇನೆ ಸರ್ವಸನ್ನದ್ಧವಾಗಿದೆ. ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಹೆಚ್ಚುವರಿ ಸೇನೆಯನ್ನು ನಿಯೋಜಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್, ಪ್ರಸ್ತುತ ಪ್ರದೇಶಗಳಲ್ಲಿ ಯಾವುದೇ ಸುರಕ್ಷಾ ಸವಾಲು ಎದುರಿಸಲು ನಮ್ಮ ಸೇನೆ ಸಿದ್ಧವಾಗಿದೆ. ಸೇನೆ ನಿಯೋಜನೆ ಮತ್ತು ಮರು ವಿಂಗಡಣೆ ಸಾಮಾನ್ಯ ಪ್ರಕ್ರಿಯೆ ಎಂದಿದ್ದಾರೆ.

ತಮ್ಮ ತಮ್ಮ ಗಡಿ ವಿಚಾರ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಎಲ್ಲ ದೇಶಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತವೆ. ಈ ಬಗ್ಗೆ ಚಿಂತಿಸಬೇಡಿ. ಇದು ಸರ್ವೇ ಸಾಮಾನ್ಯ. ಪ್ರತಿಯೊಬ್ಬರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಈ ಬಗ್ಗೆ ನಾವು ತುಂಬಾ ಚಿಂತೆ ಮಾಡಿಕೊಳ್ಳುವ ಅಗತ್ಯವಿಲ್ಲ. ಸೇನೆ ದೇಶದ ಸೇವೆಗಾಗಿ ಸನ್ನದ್ಧವಾಗಿದೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ನಾವು ಸಜ್ಜಾಗಿದ್ದೇವೆ ಎಂದು ರಾವತ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com