ಜಮ್ಮು-ಕಾಶ್ಮೀರದ ಪರಿಸ್ಥಿತಿ ಸೂಕ್ಷ್ಮ: ನಿರ್ಬಂಧ ತೆರವಿಗೆ ನಿರ್ದೇಶನ ನೀಡಲು ಸುಪ್ರೀಂ ನಕಾರ

ಜಮ್ಮು-ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಿಧಿಸಲಾಗಿರುವ ನಿರ್ಬಂಧ ತೆರವಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಿಧಿಸಲಾಗಿರುವ ನಿರ್ಬಂಧ ತೆರವಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 
 
ಆರ್ಟಿಕಲ್ 370 ರದ್ದುಗೊಂಡ ಬಳಿಕ ನಿರ್ಬಂಧ ವಿಧಿಸಲಾಗಿರುವುದನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ಕಾರ್ಯಕರ್ತರಾದ ತೆಹ್ಸೀನ್ ಪೂನಾವಾಲಾ, ನಿರ್ಬಂಧ ತೆರವಿಗೆ ಕೇಂದ್ರಕ್ಕೆ ನಿರ್ದೇಶ ನೀಡಲು ಮನವಿ ಮಾಡಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. 

ಆ.13 ರಂದು ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಅರುಣ್ ಮಿಶ್ರಾ ನೇತೃತ್ವದ ಪೀಠ, ಜಮ್ಮು-ಕಾಶ್ಮೀರ ಸೂಕ್ಷ್ಮವಾಗಿದೆ. ಅಲ್ಲಿನ ಪರಿಸ್ಥಿತಿ ಸಹಜತೆಗೆ ಮರಳುವಂತೆ ಮಾಡುವುದಕ್ಕೆ ಕೇಂದ್ರ ಸರ್ಕಾರ ಒಂದಷ್ಟು ಸಮಯ ನೀಡಬೇಕು, ಆದ್ದರಿಂದ ನಿರ್ಬಂಧ ತೆರವಿಗೆ ಕೇಂದ್ರಕ್ಕೆ ನಿರ್ದೇಶನ ನೀಡುವುದಕ್ಕೆ ಸಾಧ್ಯವಿಲ್ಲ ಈ ವಿಷಯದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿದೆ. 

ಜಮ್ಮು-ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಖಾತ್ರಿಪಡಿಸಿಕೊಳ್ಳಬೇಕಾಗಿದೆ, ಕೇಂದ್ರ ಸರ್ಕಾರ ಪ್ರತಿ ದಿನವೂ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದು,  ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿಂದ ವರದಿ ತರಿಸಿಕೊಂಡು ಕ್ರಮೇಣ ನಿರ್ಬಂಧಗಳನ್ನು ಸಡಿಲಗೊಳಿಸಲಾಗುತ್ತಿದೆ. ಈ ವರೆಗೂ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ" ಎಂದು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ವಕೀಲ ಅಟಾರ್ನಿ ಜನರಲ್, ವೇಣುಗೋಪಾಲ್ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. 2016 ರ ಜುಲೈ ನಲ್ಲಿ ಉಗ್ರ ಬುರ್ಹಾನ್ ವನಿಯನ್ನು ಎನ್ ಕೌಂಟರ್ ಮಾಡಿದ್ದಾಗ ಉಂಟಾಗಿದ್ದ ಪ್ರಕ್ಷುಬ್ಧ ವಾತಾವರಣದಿಂದ ಕಾಶ್ಮೀರ ಸ್ಥಿತಿಯನ್ನು ಸಹಜತೆಗೆ ತರಲು 3 ತಿಂಗಳ ಕಾಲಾವಕಾಶ ಬೇಕಾಯಿತು. ಈಗ ಕೆಲವೇ ದಿನಗಳಲ್ಲಿ ಪರಿಸ್ಥಿತಿಯನ್ನು ಸಹಜತೆಗೆ ತರಲಾಗುವುದು ಎಂದು ವೇಣುಗೋಪಾಲ್ ಹೇಳಿದ್ದಾರೆ.    

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com