ಡಿಸೆಂಬರ್ ನಲ್ಲಿ ಬಿಜೆಪಿ ಅಧ್ಯಕ್ಷ, ರಾಜ್ಯಾಧ್ಯಕ್ಷರ ಆಯ್ಕೆ: ಮೂಲಗಳ ಮಾಹಿತಿ 

ಬಿಜೆಪಿ ಸದಸ್ಯತ್ವ ಅಭಿಯಾನ ದೇಶದೆಲ್ಲೆಡೆ ನಡೆಯುತ್ತಿರುವುದರ ಮಧ್ಯೆ ಬಿಜೆಪಿ ರಾಷ್ಟ್ರಾಧ್ಯಕ್ಷ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗಳಿಗೆ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಮಂಡಳಿಯನ್ನು ಇದೇ ಸಂದರ್ಭದಲ್ಲಿ ರಚಿಸಲಾಗುವುದು. 
ಜೆ ಪಿ ನಡ್ಡಾ
ಜೆ ಪಿ ನಡ್ಡಾ

ನವದೆಹಲಿ: ಬಿಜೆಪಿ ಸದಸ್ಯತ್ವ ಅಭಿಯಾನ ದೇಶದೆಲ್ಲೆಡೆ ನಡೆಯುತ್ತಿರುವುದರ ಮಧ್ಯೆ ಬಿಜೆಪಿ ರಾಷ್ಟ್ರಾಧ್ಯಕ್ಷ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗಳಿಗೆ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಮಂಡಳಿಯನ್ನು ಇದೇ ಸಂದರ್ಭದಲ್ಲಿ ರಚಿಸಲಾಗುವುದು.


ಬಿಜೆಪಿಯ ಚುನಾವಣಾಧಿಕಾರಿ ಮತ್ತು ಮಾಜಿ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಅವರು ಈ ವಿಷಯ ತಿಳಿಸಿದ್ದು ಡಿಸೆಂಬರ್ ಮಧ್ಯದ ವೇಳೆಗೆ ರಾಷ್ಟ್ರೀಯ ಮಂಡಳಿಯನ್ನು ರಚಿಸಲಾಗುವುದು ಎಂದು ಹೇಳಿದರು.


ಡಿಸೆಂಬರ್ 1ರಿಂದ 15ರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಚುನಾವಣೆ ಮತ್ತು ರಾಷ್ಟ್ರೀಯ ಮಂಡಳಿ ರಚನೆ ನಡೆಯಲಿದೆ. ಪ್ರತಿ ರಾಜ್ಯದಿಂದ ರಾಷ್ಟ್ರೀಯ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಗುವುದು ಎಂದು ರಾಧಾ ಸಿಂಗ್ ಅವರು ತಯಾರಿಸಿರುವ ಸಂಘಟಿತ ಚುನಾವಣೆಗಳ ವೇಳಾಪಟ್ಟಿಯಿಂದ ತಿಳಿದುಬಂದಿದೆ.


ಕೇಂದ್ರದ ಮಾಜಿ ಸಚಿವ ಜೆ ಪಿ ನಡ್ಡಾ ಅವರು ಬಿಜೆಪಿ ಕಾರ್ಯಾಧ್ಯಕ್ಷರಾಗಿ ಈಗಾಗಲೇ ನೇಮಕಗೊಂಡಿದ್ದಾರೆ. ಡಿಸೆಂಬರ್ ಅಂತ್ಯದ ವೇಳೆಗೆ ಪಕ್ಷದ ಹೊಸ ಅಧ್ಯಕ್ಷರ ನೇಮಕವಾಗುವವರೆಗೆ ಅಮಿತ್ ಶಾ ಅವರೇ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಮುಂದಿನ ಜಾರ್ಖಂಡ್, ಹರ್ಯಾಣ, ಮಹಾರಾಷ್ಟ್ರ, ದೆಹಲಿ ವಿಧಾನಸಭೆ ಚುನಾವಣೆಗಳ ಉಸ್ತುವಾರಿಯನ್ನು ಅಮಿತ್ ಶಾ ಅವರೇ ನಿರ್ವಹಿಸಲಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭೆಗಳಿಗೆ ಚುನಾವಣೆ ನಡೆಸುವುದು ಇನ್ನೂ ಸ್ಪಷ್ಟವಾಗಿ ನಿಗದಿಯಾಗಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com