ಪರೀಕ್ಷಾ ಶುಲ್ಕ ಹೆಚ್ಚಳ ಅನಿವಾರ್ಯವಾಗಿತ್ತು; ಸಿಬಿಎಸ್ಇ ಸಮರ್ಥನೆ

ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪರೀಕ್ಷಾ ಮೌಲ್ಯಮಾಪನ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಹಾಗೂ ಹಣಕಾಸಿನ ಕೊರತೆಯನ್ನು ನೀಗಿಸಲು ಶುಲ್ಕ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. 
ಪರೀಕ್ಷಾ ಶುಲ್ಕ ಹೆಚ್ಚಳ ಅನಿವಾರ್ಯವಾಗಿತ್ತು; ಸಿಬಿಎಸ್ಇ ಸಮರ್ಥನೆ

ನವದೆಹಲಿ: ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೂ ಅನ್ವಯವಾಗುವಂತೆ 10 ಹಾಗೂ 12ನೇ ತರಗತಿಯ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪರೀಕ್ಷಾ ಮೌಲ್ಯಮಾಪನ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಹಾಗೂ ಹಣಕಾಸಿನ ಕೊರತೆಯನ್ನು ನೀಗಿಸಲು ಶುಲ್ಕ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.


ರಾಜಕೀಯ ಪಕ್ಷಗಳು ಸೇರಿದಂತೆ ವಿವಿಧ ಭಾಗಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಮಂಡಳಿ, 5 ವರ್ಷಗಳ ನಂತರ ಶುಲ್ಕ ಏರಿಕೆ ಮಾಡಿರುವುದಕ್ಕೆ ಹಲವಾರು ಕಾರಣಗಳನ್ನು ನೀಡಿದೆ. ಕಾಗದಗಳ ವೆಚ್ಚದಲ್ಲಿ ಭಾರಿ ಹೆಚ್ಚಳ, ಗೌಪ್ಯ ವಸ್ತುಗಳ ಮುದ್ರಣ, ಸಾರಿಗೆ, ಸಂಗ್ರಹಣೆ ಮತ್ತು ಉಪಕರಣಗಳು, ಹೊಸ ತಾಂತ್ರಿಕ ಸಂಸ್ಕರಣೆಗಳ ಬಳಕೆಗೆ ಹೆಚ್ಚಿದ ವೆಚ್ಚಗಳು ಪರೀಕ್ಷಾ ಶುಲ್ಕದ ಹೆಚ್ಚಳಕ್ಕೆ ಕಾರಣಗಳಾಗಿವೆ ಎಂದು ತಿಳಿಸಿದೆ. 


ತರಗತಿಯ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪರೀಕ್ಷಾ ಮೌಲ್ಯಮಾಪನ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಹಾಗೂ ಹಣಕಾಸಿನ ಕೊರತೆಯನ್ನು ನೀಗಿಸಲು ಶುಲ್ಕ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com