ವಿಧಿ 370ರ ರದ್ಧತಿ: 11 ದಿನಗಳ ಕಾಶ್ಮೀರ ಭೇಟಿ ಬಳಿಕ ಅಜಿತ್ ಧೋವಲ್ ದೆಹಲಿಗೆ ವಾಪಸ್

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಕಾಶ್ಮೀರದಲ್ಲಿ ಭದ್ರತಾ ಮೇಲ್ವಿಚಾರಣೆ ಉಸ್ತುವಾರಿ ಹೊತ್ತಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ದೆಹಲಿಗೆ ವಾಪಸ್ ಆಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಾಶ್ಮೀರದಲ್ಲಿ ಭದ್ರತಾ ಮೇಲ್ವಿಚಾರಣೆ ಉಸ್ತುವಾರಿ ಹೊತ್ತಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಕಾಶ್ಮೀರದಲ್ಲಿ ಭದ್ರತಾ ಮೇಲ್ವಿಚಾರಣೆ ಉಸ್ತುವಾರಿ ಹೊತ್ತಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ದೆಹಲಿಗೆ ವಾಪಸ್ ಆಗಿದ್ದಾರೆ.

ಬರೊಬ್ಬರಿ 11 ದಿನಗಳ ಕಾಲ ಕಣಿವೆ ರಾಜ್ಯದಲ್ಲಿಯೇ ಉಳಿದು ಅಲ್ಲಿನ ಭದ್ರತಾ ಮೇಲ್ವಿಚಾರಣೆ ನಡೆಸಿದ್ದ ಅಜಿತ್ ಧೋವಲ್ ಅವರು, ಇದೀಗ ಮರಳಿ ದೆಹಲಿಗೆ ವಾಪಸ್ ಆಗಿದ್ದಾರೆ. ವಿಧಿ 370 ರದ್ಧತಿ ಬಳಿಕ ಕಾಶ್ಮೀರದಲ್ಲಿ ಸಂಭಾವ್ಯ ಹಿಂಸಾಚಾರದ ಹಿನ್ನಲೆಯಲ್ಲಿ ಧೋವಲ್ ಅವರು ಕಾಶ್ಮೀರಕ್ಕೆ ತೆರಳಿದ್ದರು. ಅಲ್ಲದೆ ಬರೊಬ್ಬರಿ 11 ದಿನಗಳ ಕಾಲ ಅಲ್ಲಿಯೇ ತಂಗಿ ಅಲ್ಲಿನ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಚರ್ಚೆ ನಡೆಸಿದ್ದರು.

ಅಲ್ಲದೆ ವಿಧಿ 370 ರದ್ಧತಿಯಿಂದ ಕಾಶ್ಮೀರಿಗಳಿಗೆ ಯಾವುದೇ ರೀತಿಯ ತೊಂದರೆ ಇಲ್ಲ. ಬದಲಿಗೆ ಆ ರಾಜ್ಯದ ಅಭಿವೃದ್ಧಿ ನೆರವಾಗಲಿದೆ ಎಂಬ ಸಂದೇಶ ಸಾರುವ ಪ್ರಯತ್ನ ನಡೆಸಿದ್ದರು. ಅಂತೆಯೇ ತಾವೇ ಖುದ್ಧು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಿಗೆ ತೆರಳಿ ಅಲ್ಲಿನ ಭದ್ರತಾ ಸಿಬ್ಬಂದಿಗಳ ನೈತಿಕ ಧೈರ್ಯ ಇಮ್ಮಡಿಗೊಳಿಸುವ ಪ್ರಯತ್ನ ಮಾಡಿದ್ದರು. 

ಅಂತೆಯೇ ಆಗಿಂದಾಗ್ಗೆ ಕೇಂದ್ರ ಸರ್ಕಾರಕ್ಕೆ ಕಣಿವೆ ರಾಜ್ಯದ ಪರಿಸ್ಥಿತಿ ಕುರಿತು ಧೋವಲ್ ವರದಿ ಸಲ್ಲಿಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಅಗತ್ಯ ಸಲಹೆ ನೀಡುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com