ಕೇಂದ್ರದಿಂದ ಮೊದಲ ಹಂತದಲ್ಲಿ 2 ಸಾವಿರ ಕೋಟಿ ರೂ. ಬಿಡುಗಡೆ ನಿರೀಕ್ಷೆ: ಆರ್.ಅಶೋಕ್

ರಾಜ್ಯದಲ್ಲುಂಟಾಗಿರುವ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರಕ್ಕೆ 10 ಸಾವಿರ ಕೋಟಿ ರೂ. ನೆರವು ಕೋರಲಾಗಿದ್ದು, ಮೊದಲ ಹಂತದಲ್ಲಿ 2 ಸಾವಿರ ಕೋಟಿ ರೂ. ಬಿಡುಗಡೆ ಮಾಡುವ ವಿಶ್ವಾಸವಿದೆ...
ಆರ್.ಅಶೋಕ್(ಸಂಗ್ರಹ ಚಿತ್ರ)
ಆರ್.ಅಶೋಕ್(ಸಂಗ್ರಹ ಚಿತ್ರ)

ದೆಹಲಿ: ರಾಜ್ಯದಲ್ಲುಂಟಾಗಿರುವ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರಕ್ಕೆ 10 ಸಾವಿರ ಕೋಟಿ ರೂ. ನೆರವು ಕೋರಲಾಗಿದ್ದು, ಮೊದಲ ಹಂತದಲ್ಲಿ 2 ಸಾವಿರ ಕೋಟಿ ರೂ. ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್ ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ

ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಅವರಿಗೆ ತಿಳಿಸಲಾಗಿದ್ದು, ರಾಜ್ಯ ಕೈಗೊಂಡಿರುವ ಪರಿಹಾರ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಐದು ಲಕ್ಷ ದಲ್ಲಿ ಮನೆ ನಿರ್ಮಾಣ ಸಾಧ್ಯವೇ ಎಂಬ ಪ್ರಶ್ನೆಯನ್ನು ಮೋದಿ ಪ್ರಸ್ತಾಪಿಸಿದ್ದಾರೆ ಎಂದರು.

ಕೇಂದ್ರದಿಂದ ಆದಷ್ಟು ಶೀಘ್ರವಾಗಿ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪೂರ್ಣ ಪ್ರಮಾಣದ ವರದಿ‌ ನೀಡಲಿದ್ದು, ಕೇಂದ್ರದಿಂದ ಸೂಕ್ತ ಪರಿಹಾರ ದೊರೆಯುವ ವಿಶ್ವಾಸವಿದೆ ಎಂದರು.

ಸಂಪುಟ ವಿಸ್ತರಣೆ ಸಂಬಂಧ ಶನಿವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಜತೆ ಈ ಬಗ್ಗೆ ಮಾತುಕತೆ ನಡೆಸಲಾಗುವುದು. ಸಂಪುಟಕ್ಕೆ ಯಾರು ಸೇರ್ಪಡೆ ಆಗಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಅಶೋಕ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com