ವೋಟರ್ ಐಡಿಗೆ ಆಧಾರ್ ಲಿಂಕ್: ಕಾನೂನು ಸಚಿವಾಲಯಕ್ಕೆ ಚುನಾವಣಾ ಆಯೋಗದ ಪತ್ರ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಆಧಾರ್ ಕಾರ್ಡ್ ಅನ್ನು ಮತದಾರರ  ಗುರುತಿನ ಚೀಟಿಗೆ ಲಿಂಕ್ ಮಾಡುವ ಕುರಿತು ಚಿಂತನೆ ನಡೆಸುವಂತೆ ಮನವಿ ಮಾಡಿದೆ ಎನ್ನಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಆಧಾರ್ ಕಾರ್ಡ್ ಅನ್ನು ಮತದಾರರ ಪಟ್ಟಿಗೆ ಲಿಂಕ್ ಮಾಡುವ ಮೂಲಕ ನಕಲಿ ಮತದಾರರ ಗುರುತಿನ ಚೀಟಿ ಹಾವಳಿ ಕಡಿಮೆಯಾಗುತ್ತವೆ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಆಧಾರ್ ಕಾರ್ಡ್ ಅನ್ನು ಮತದಾರರ  ಗುರುತಿನ ಚೀಟಿಗೆ ಲಿಂಕ್ ಮಾಡುವ ಕುರಿತು ಚಿಂತನೆ ನಡೆಸುವಂತೆ ಮನವಿ ಮಾಡಿದೆ ಎನ್ನಲಾಗಿದೆ.

ಮಾಧ್ಯಮವೊಂದು ವರದಿ ಮಾಡಿರುವಂತೆ ಆಧಾರ್ ಕಾರ್ಡ್ ಅನ್ನು ಮತದಾರರ ಗುರುತಿನ ಚೀಟಿ (Voter ID) ಜೊತೆ ಲಿಂಕ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಶುಕ್ರವಾರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಸಾರ್ವಜನಿಕ ಪ್ರಾತಿನಿಧ್ಯ ಕಾನೂನು ಮತ್ತು ಆಧಾರ್‌ಗೆ ಸಂಬಂಧಿಸಿದ ಕಾನೂನನ್ನು ತಿದ್ದುಪಡಿ ಮಾಡುವಂತೆ ಕಾನೂನು ಸಚಿವಾಲಯವನ್ನು ಒತ್ತಾಯಿಸಿದೆ ಎನ್ನಲಾಗಿದೆ. 

ಆಧಾರ್ ಕಾರ್ಡ್ ಅನ್ನು ಮತದಾರರ ಪಟ್ಟಿಗೆ ಲಿಂಕ್ ಮಾಡುವ ಮೂಲಕ ನಕಲಿ ಮತದಾರರ ಗುರುತಿನ ಚೀಟಿ ಹಾವಳಿ ಕಡಿಮೆಯಾಗುತ್ತವೆ ಎಂದು ಚುನಾವಣಾ ಆಯೋಗ ಪತ್ರದಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ್‌ಗೆ ಜೋಡಿಸಬೇಕು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗವು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.  ಅಂತೆಯೇ ಮತದಾರರ ಗುರುಚಿನ ಚೀಟಿಯನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡುವುದರಿಂದ ಚುನಾವಣೆಯಲ್ಲಿ ನಕಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತದೆ ಎಂದು ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com