ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ;ದಾಳಿಯಲ್ಲಿ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ ಹುತಾತ್ಮ 

ಪಾಕಿಸ್ತಾನ ಸೇನೆ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು ಇದಕ್ಕೆ ಭಾರತೀಯ ಸೇನಾ ಯೋಧರು ನಡೆಸಿದ ಪ್ರತಿದಾಳಿ ಸಂದರ್ಭದಲ್ಲಿ ಉಂಟಾದ ಗುಂಡಿನ ಚಕಮಕಿಯಲ್ಲಿ ಲ್ಯಾನ್ಸೆ ನಾಯಕ್ ಸಂದೀಪ್ ತಾಪಾ ಹುತಾತ್ಮರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಜೌರಿ(ಜಮ್ಮು-ಕಾಶ್ಮೀರ): ಪಾಕಿಸ್ತಾನ ಸೇನೆ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು ಇದಕ್ಕೆ ಭಾರತೀಯ ಸೇನಾ ಯೋಧರು ನಡೆಸಿದ ಪ್ರತಿದಾಳಿಗೆ ಲ್ಯಾನ್ಸೆ ನಾಯಕ್ ಸಂದೀಪ್ ತಾಪಾ ಹುತಾತ್ಮರಾಗಿದ್ದಾರೆ.


ಇಂದು ಬೆಳಗ್ಗೆ ಜಮ್ಮುವಿನ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಬಂದು ಪಾಕಿಸ್ತಾನ ಸೇನಾ ಯೋಧರು ಅಪ್ರಚೋದಿತ ಗುಂಡಿದ ದಾಳಿ ನಡೆಸಲಾರಂಭಿಸಿದರು. 


ಇದಕ್ಕೆ ಗಡಿಯನ್ನು ಕಾಯುತ್ತಿದ್ದ ಭಾರತೀಯ ಸೇನಾ ಯೋಧರು ತಕ್ಕ ಪ್ರತ್ಯುತ್ತರ ನೀಡಲು ಆರಂಭಿಸಿದರು. ಈ ದಾಳಿಯಲ್ಲಿ ಲ್ಯಾನ್ಸೆ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ ಹುತಾತ್ಮರಾಗಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.


 ಈ ವರದಿ ಬರುವವರೆಗೂ ಎರಡೂ ಕಡೆಯ ಸೇನೆಯಿಂದ ದಾಳಿ ಮುಂದುವರಿದಿದೆ. ಇಂದು ಬೆಳಗ್ಗೆ 6.30ರ ಸುಮಾರಿಗೆ ಪಾಕಿಸ್ತಾನ ಸೇನಾ ಯೋಧರು ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಕುಗ್ರಾಮದಲ್ಲಿ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಬಂದು ಅಪ್ರಚೋದಿತ ಗುಂಡಿನ ಮಳೆಗೈಯಲಾರಂಭಿಸಿದರು. ಇದರಲ್ಲಿ ಡೆಹ್ರಾಡೂನ್ ಮೂಲದ 35 ವರ್ಷದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ ಹುತಾತ್ಮಗೊಂಡಿದ್ದಾರೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.


ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವಾದ ಸಂವಿಧಾನ ವಿಧಿ 370ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಜಮ್ಮು-ಕಾಶ್ಮೀರ ಮತ್ತು ಲಡಾಕ್ ನಲ್ಲಿ ನಿಷೇಧಾಜ್ಞೆ ಹೇರಲಾಗಿತ್ತು. ಸಾರ್ವಜನಿಕ ಜೀವನ ಸ್ಥಗಿತವಾಗಿತ್ತು. ಅದನ್ನು ನಿನ್ನೆ ಭಾಗಶಃ ಸರ್ಕಾರ ಸಡಿಲಗೊಳಿಸಿ ಇನ್ನೇನು ಸಾಮಾನ್ಯ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ ಎನ್ನುವಷ್ಟರಲ್ಲಿ ಪಾಕಿಸ್ತಾನ ಸೇನೆ ದಾಳಿ ಆರಂಭಿಸಿದೆ.


ಭಾರತ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದು ಈ ಹಿನ್ನಲೆಯಲ್ಲಿ ಈ ದಾಳಿ ನಡೆಸಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. 


ಕಳೆದ ತಿಂಗಳು ಸಹ ಪಾಕಿಸ್ತಾನ ಸೇನೆ ಪೂಂಚ್ ಮತ್ತು ರಜೌರಿ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ನಡೆಸಿದ್ದ ದಾಳಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿ 10 ದಿನಗಳ ಮಗು ಮೃತಪಟ್ಟಿತ್ತು ಮತ್ತು ಹಲವು ನಾಗರಿಕರು ಗಾಯಗೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com