ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ ಪಾಕಿಸ್ತಾನ ಜೊತೆ ಮಾತುಕತೆ: ರಾಜನಾಥ್ ಸಿಂಗ್ 

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(P0K) ಬಗ್ಗೆ ಮಾತ್ರ ಪಾಕಿಸ್ತಾನದ ಜೊತೆಗೆ ಭಾರತ ಮಾತುಕತೆಗೆ ಸಿದ್ದ ಎಂದು ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ಕಲ್ಕಾ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(P0K) ಬಗ್ಗೆ ಮಾತ್ರ ಪಾಕಿಸ್ತಾನದ ಜೊತೆಗೆ ಭಾರತ ಮಾತುಕತೆಗೆ ಸಿದ್ದ ಎಂದು ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.


ಪಾಕಿಸ್ತಾನ ಜೊತೆಗೆ ಮಾತುಕತೆ ನಡೆಸುವುದಾದರೆ ಅದು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ ಎಂದು ಚಂಡೀಗಢದಿಂದ 20 ಕಿಲೋ ಮೀಟರ್ ದೂರದಲ್ಲಿರುವ ಕಲ್ಕಾದಲ್ಲಿ ಜನ ಆಶೀರ್ವಾದ ಯಾತ್ರೆಯಲ್ಲಿ ಮಾತನಾಡಿದರು.


ಹರ್ಯಾಣದ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಜನ ಆಶೀರ್ವಾದ ಯಾತ್ರೆಯನ್ನು ಕೈಗೊಳ್ಳಲಾಗಿದ್ದು ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಸೆಪ್ಟೆಂಬರ್ 8ರಂದು ರೊಹ್ಟಕ್ ನಲ್ಲಿ ಮುಕ್ತಾಯವಾಗಲಿದೆ.


ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಕೃಷಿ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಮತ್ತು ಸಂಪುಟ ಸಚಿವರು ಯಾತ್ರೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಸಂವಿಧಾನ ವಿಧಿ 370 ರದ್ದು ಮಾಡಿದ್ದು ಜಮ್ಮು-ಕಾಶ್ಮೀರದ ಅಭಿವೃದ್ಧಿಗಾಗಿ. ಭಾರತ ತಪ್ಪು ಮಾಡಿದೆ ಎಂದು ಪಾಕಿಸ್ತಾನ ವಿಶ್ವಸಂಸ್ಥೆಗೆ ದೂರು ನೀಡಿದೆ. ಭಯೋತ್ಪಾದನೆ ನಿಲ್ಲಿಸಿದರೆ ಮಾತ್ರ ಪಾಕಿಸ್ತಾನದೊಂದಿಗೆ ಭಾರತ ಮಾತುಕತೆಗೆ ಸಿದ್ದ ಎಂದು ಹೇಳಿದರು.


ಕೆಲ ದಿನಗಳ ಹಿಂದೆ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಬಾಲಾಕೋಟ್ ವಾಯುದಾಳಿಗಿಂತ ದೊಡ್ಡ ಮಟ್ಟದ ಕಾರ್ಯತಂತ್ರವನ್ನು ಭಾರತ ಯೋಜಿಸುತ್ತಿದೆ ಎಂದು ಹೇಳಿದ್ದರು, ಅಂದರೆ ಬಾಲಾಕೋಟ್ ವಾಯುದಾಳಿ ನಡೆದಿದ್ದು ನಿಜವೆಂದು ಪಾಕಿಸ್ತಾನ ಒಪ್ಪಿಕೊಂಡಂತಾಯಿತಲ್ಲವೇ ಎಂದು ರಾಜನಾಥ್ ಸಿಂಗ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com