ಯುಪಿಎ ಅವಧಿಯ ವಿಮಾನಯಾನ ಹಗರಣ: ಚಿದಂಬರಂಗೆ ಇಡಿ ಸಮನ್ಸ್

ಯುಪಿಎ ಆಡಳಿತಾವಧಿಯಲ್ಲಿ ನಡೆದಿದ್ದ ವಿಮಾನಯಾನ ಹಗರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.
ಚಿದಂಬರಂ
ಚಿದಂಬರಂ

ನವದೆಹಲಿ: ಯುಪಿಎ ಆಡಳಿತಾವಧಿಯಲ್ಲಿ ನಡೆದಿದ್ದ ವಿಮಾನಯಾನ ಹಗರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ಬಹುಕೋಟಿ ವಿಮಾನಯಾನ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 23ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಚಿದಂಬರಂ ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳಿಗೆ ಏರ್ ಸ್ಲಾಟ್‌ಗಳನ್ನು ನಿಗದಿಪಡಿಸುವಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು, ಇದರಿಂದ ಏರ್ ಇಂಡಿಯಾ ಭಾರಿ ನಷ್ಟ ಅನುಭವಿಸಿತ್ತು.

ಈ ಸಂಬಂಧ ಈಗಗಾಲೇ ಮಾಜಿ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರನ್ನು ಸಹ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿದೆ.

ಪ್ರಫುಲ್ ಪಟೇಲ್ ಹಗರಣದ ಪ್ರಮುಖ ಆರೋಪಿ ದೀಪಕ್ ತಲ್ವಾರ್ ಮತ್ತು ಅವರ ಪುತ್ರ ಆದಿತ್ಯ ತಲ್ವಾರ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂದು ಆರೋಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com