ಡೊನಾಲ್ಡ್ ಟ್ರಂಪ್ ಜೊತೆ ಮೋದಿ ದೂರವಾಣಿ ಸಂಭಾಷಣೆ: ಪಾಕಿಸ್ತಾನದ ಬಗ್ಗೆ ಮಾತುಕತೆ

 ಪ್ರಧಾನಿ ನರೇಂದ್ರ ಮೋದಿ ಆ.19 ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. 
ಡೊನಾಲ್ಡ್ ಟ್ರಂಪ್ ಜೊತೆ ಮೋದಿ ದೂರವಾಣಿ ಸಂಭಾಷಣೆ: ಪಾಕಿಸ್ತಾನದ ಬಗ್ಗೆ ಮಾತುಕತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆ.19 ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. 

ಮಾತುಕತೆ ವೇಳೆ ಭಾರತದ ವಿರುದ್ಧ ದ್ವೇಷ ಕಾರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗಳ ಬಗ್ಗೆ ಮೋದಿ ಉಲ್ಲೇಖಿಸಿದ್ದು, ಈ ರೀತಿಯ ದ್ವೇಷಪೂರಿತ ಹೇಳಿಕೆಗಳು ಶಾಂತಿಗೆ ಪೂರಕವಾಗಿರುವುದಿಲ್ಲ ಎಂದು ಟ್ರಂಪ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. 

ಅರ್ಧ ಗಂಟೆ (30 ನಿಮಿಷ) ಮೋದಿ ಟ್ರಂಪ್ ಜೊತೆ ಮಾತನಾಡಿದ್ದು, ಈ ವೇಳೆ ದ್ವಿಪಕ್ಷೀಯ ಹಾಗೂ ಪ್ರಾದೇಶಿಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. 

ಪ್ರಧಾನಿ ಕಾರ್ಯಾಲಯ ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಉಭಯ ನಾಯಕರ ಮಾತುಕತೆ ಸೌಹಾರ್ದಯುತವಾಗಿತ್ತು ಎಂದಷ್ಟೇ ಹೇಳಿದೆ. 

ಪ್ರಾದೇಶಿಕ ಪರಿಸ್ಥಿತಿಯ ವಿಷಯ ಮಾತನಾಡಿದಾಗ ಪರೋಕ್ಷವಾಗಿ ಪಾಕಿಸ್ತಾನದ ಭಾರತ ವಿರೋಧಿ ಹೇಳಿಕೆಗಳನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾದೇಶಿಕ ಶಾಂತಿಕೆ ಕೆಲವು ನಾಯಕರ ಹೇಳಿಕೆ ಪೂರಕವಾಗಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com