ಜಮ್ಮು- ಕಾಶ್ಮೀರ: ಪ್ರವಾಹದಲ್ಲಿ ಸಿಲುಕಿದ ವ್ಯಕ್ತಿಗಳ ರಕ್ಷಣಾ ಕಾರ್ಯಾಚರಣೆ! ಭಯಾನಕ ವಿಡಿಯೋ

ಜಮ್ಮುವಿನ ಬಳಿ ನಿರ್ಮಾಣ ಹಂತದ ಸೇತುವೆ ಕೆಳಗೆ ಪ್ರವಾಹದ ನೀರಿನ ಮಧ್ಯ ಸಿಕ್ಕಿ ಹಾಕಿಕೊಂಡಿದ್ದ ನಾಲ್ವರು  ವ್ಯಕ್ತಿಗಳನ್ನು ವಾಯುಪಡೆಯ ಸಿಬ್ಬಂದಿಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ

ಜಮ್ಮು-ಕಾಶ್ಮೀರ: ಉತ್ತರ ಭಾರತದ ಅನೇಕ ಕಡೆಗಳಲ್ಲಿ ಪ್ರವಾಹದ ಪರಿಸ್ಥಿತಿ ಮುಂದುವರೆದಿದೆ. ಜಮ್ಮುವಿನ ಬಳಿ ನಿರ್ಮಾಣ ಹಂತದ ಸೇತುವೆ ಕೆಳಗೆ ಪ್ರವಾಹದ ನೀರಿನ ಮಧ್ಯ ಸಿಕ್ಕಿ ಹಾಕಿಕೊಂಡಿದ್ದ ನಾಲ್ವರು  ವ್ಯಕ್ತಿಗಳನ್ನು ವಾಯುಪಡೆಯ ಸಿಬ್ಬಂದಿಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ತಾವಿ ನದಿಯಲ್ಲಿನ ನೀರಿನ ಮಟ್ಟ ಹಠಾತ್ತನೇ  ಹೆಚ್ಚಾದರಿಂದ ಸೇತುವೆ ಕೆಳಗೆ ಕೆಲಸ ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಈ ಬಗ್ಗೆ  ಮಾಹಿತಿ ಪಡೆದ ಭಾರತೀಯ ವಾಯುಪಡೆ, ಹೆಲಿಕಾಪ್ಟರ್ ಗಳನ್ನು ಕಳುಹಿಸಿ  ಸಂತ್ರಸ್ತರನ್ನು ಸುರಕ್ಷಿತವಾಗಿ ಸಂಕಷ್ಟದಿಂದ ಪಾರು ಮಾಡಿದ್ದಾರೆ.

ಕೆಲ ವ್ಯಕ್ತಿಗಳು ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಮಾಹಿತಿ ಪಡೆಯಲಾಯಿತು. ನಂತರ 12-30ರ ವೇಳೆಗೆ ಹೆಲಿಕಾಪ್ಟರ್ ಗಳನ್ನು ಕಳುಹಿಸಲಾಯಿತು. ಗರುಡ ಕಮಾಂಡೋಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಸುರಕ್ಷಿತವಾಗಿ ರಕ್ಷಿಸಿರುವುದಾಗಿ ಜಮ್ಮುವಿನ ವಾಯುಪಡೆ ಮುಖ್ಯ ಕಾರ್ಯಾಚರಣೆ ಅಧಿಕಾರಿ ಸಂದೀಪ್ ಸಿಂಗ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com