ಕಾಶ್ಮೀರ: ಪಾಕ್ ನಿಂದ ಗುಂಡಿನ ದಾಳಿ, ಭಾರತೀಯ ಯೋಧ ಹುತಾತ್ಮ, ನಾಲ್ವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮಗಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಕೃಷ್ಣ ಘಾಟಿ ಸಕ್ಟರ್ ನಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಪಾಕ್ ಸೇನೆ ನಿರಂತರ ಗುಂಡಿನ ದಾಳಿ ನಡೆಸುತ್ತಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.

ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಸೇನೆ ಭಾರತೀಯ ಪೋಸ್ಟ್ ಗಳು ಹಾಗೂ ಹಳ್ಳಿಗಳನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಉಭಯ ದೇಶಗಳ ನಡುವೆ ಗುಂಡಿನ ದಾಳಿ ನಡೆಯುತ್ತಿದ್ದು, ಘಟನೆಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.

ಕಳೆದ ವಾರ,ಪೂಂಚ್ ಜಿಲ್ಲೆ ಸಮೀಪದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು, ಆ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com