ಆಧಾರ್‌ನೊಂದಿಗೆ ಬಳಕೆದಾರರ ಪ್ರೊಫೈಲ್ ಲಿಂಕ್: ಪ್ರಕರಣಗಳ ವರ್ಗಾವಣೆ ಕುರಿತ ಫೇಸ್‌ಬುಕ್‌ನ ಮನವಿ ಆಲಿಸಲು ಸುಪ್ರೀಂ ಒಪ್ಪಿಗೆ

ಬಳಕೆದಾರರ ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳನ್ನು ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವ ಬೇಡಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ವರ್ಗಾವಣೆ ಮಾಡುವಂತೆ ಫೇಸ್‌ಬುಕ್ ಇಂಕ್ ಸಲ್ಲಿಸಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಬಳಕೆದಾರರ ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳನ್ನು ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವ ಬೇಡಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ವರ್ಗಾವಣೆ ಮಾಡುವಂತೆ ಫೇಸ್‌ಬುಕ್ ಇಂಕ್ ಸಲ್ಲಿಸಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

ಸರ್ವೋಚ್ಚ ನ್ಯಾಯಾಲಯವು ಕೇಂದ್ರ, ಗೂಗಲ್, ಟ್ವಿಟರ್, ಯೂಟ್ಯೂಬ್ ಮತ್ತಿತರರಿಗೆ ನೋಟಿಸ್ ನೀಡಿ ಸೆಪ್ಟೆಂಬರ್ 13 ರೊಳಗೆ ಅವರ ಪ್ರತಿಕ್ರಿಯೆ ಕೋರಿತು

ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ವರನ್ನೊಳಗೊಂಡ ನ್ಯಾಯಪೀಠವು ನೋಟಿಸ್‌ಗಳನ್ನು ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಹೇಳಿದರು. ಸಾಮಾಜಿಕ ಮಾಧ್ಯಮಗಳ ಸಂಪರ್ಕಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯು ಮದ್ರಾಸ್ ಹೈಕೋರ್ಟ್ ಮುಂದೆ ಬಾಕಿ  ಇದ್ದು ಆಧಾರ್‌ನೊಂದಿಗೆ ಪ್ರೊಫೈಲ್‌ಗಳನ್ನು ಸಂಪರ್ಕಿಸುವ ಆದೇಶವನ್ನು ಅಂಗೀಕರಿಸಲಾಗುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ನಕಲಿ, ಮಾನಹಾನಿಕರ ಮತ್ತು ಅಶ್ಲೀಲ ವಿಷಯಗಳ ಪ್ರಸರಣವನ್ನು ರಾಷ್ಟ್ರ ವಿರೋಧಿ ಮತ್ತು ಭಯೋತ್ಪಾದಕ ಸಂಪರ್ಕಗಳನ್ನು  ಪರಿಶೀಲಿಸಲು ಬಳಕೆದಾರರ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ಆಧಾರ್ ಸಂಖ್ಯೆಗಳೊಂದಿಗೆ ಸಂಪರ್ಕಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸೋಮವಾರ ತಮಿಳುನಾಡು ಸರ್ಕಾರ ತಿಳಿಸಿದೆ. 12-ಅಂಕಿಯ ಆಧಾರ್ ಸಂಖ್ಯೆ, ಬಯೋಮೆಟ್ರಿಕ್ ವಿಶಿಷ್ಟ ಗುರುತು ಹಂಚಿಕೆಯನ್ನು ಮಾಡುವುದರಿಂದ ಬಳಕೆದಾರರ ಗೌಪ್ಯತೆ ನೀತಿಯನ್ನು ಉಲ್ಲಂಘಿಸಿದಂತಾಗಲಿದೆ ಎಂದು ಫೇಸ್‌ಬುಕ್ ಇಂಕ್ ತಮಿಳುನಾಡಿನ ಸಲಹೆಯನ್ನು ವಿರೋಧಿಸುತ್ತಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com