ರಾಜೀವ್ ಗಾಂಧಿ 75ನೇ ಜನ್ಮ ದಿನಾಚರಣೆ: ದಿವ್ಯಾಂಗರಿಗೆ ಸ್ಕೂಟರ್ ವಿತರಿಸಿದ ಸೋನಿಯಾ, ರಾಹುಲ್

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನಾಚರಣೆಯಂದು ರಾಜೀವ್ ಗಾಂಧಿ ಪ್ರತಿಷ್ಠಾನದ ವತಿಯಿಂದ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ
ಸೋನಿಯಾ ಗಾಂಧಿ - ರಾಹುಲ್ ಗಾಂಧಿ
ಸೋನಿಯಾ ಗಾಂಧಿ - ರಾಹುಲ್ ಗಾಂಧಿ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನಾಚರಣೆಯಂದು ರಾಜೀವ್ ಗಾಂಧಿ ಪ್ರತಿಷ್ಠಾನದ ವತಿಯಿಂದ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಅವರು ಮಂಗಳವಾರ ದಿವ್ಯಾಂಗರಿಗೆ ಸ್ಕೂಟರ್ ವಿತರಿಸಿದರು.

ಈ ಸಂದರ್ಭದಲ್ಲಿ, ರಾಹುಲ್ ಗಾಂಧಿ ಪ್ರತಿಷ್ಠಾನದಲ್ಲಿ ದಿವ್ಯಾಂಗರೊಂದಿಗೆ ಸಂವಾದ ನಡೆಸಿದರು.

ಸ್ಕೂಟರ್ ವಿತರಣೆಯ ಕಾರ್ಯವು ಕಾಂಗ್ರೆಸ್ ಪಕ್ಷವು ರಾಜೀವ್ ಗಾಂಧಿಯವರ 75 ನೇ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಒಂದು ವಾರದ ಆಚರಣೆಯ ಭಾಗವಾಗಿದೆ.

ಇದೇ ವೇಳೆ ಸೋನಿಯಾ ಗಾಂಧಿ ಮತ್ತು ರಾಹುಲ್ ಅವರು ರಾಜೀವ್ ಗಾಂಧಿ ಪ್ರತಿಷ್ಠಾನದಲ್ಲಿ ನಡೆಯುತ್ತಿರುವ ರಾಜೀವ್‌ ಅವರ ಜೀವನ ಚರಿತ್ರೆ ಸಾರುವ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com