ದೆಹಲಿ: ಉದ್ಯಮಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಮೂವರು ಎನ್ಐಎ ಅಧಿಕಾರಿಗಳ ವರ್ಗಾವಣೆ 

ದೆಹಲಿ ಮೂಲದ ಉದ್ಯಮಿಯೊಬ್ಬರು ತಮಗೆ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದ ಹಿನ್ನಲೆಯಲ್ಲಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಸೇರಿದಂತೆ ಮೂವರು ರಾಷ್ಟ್ರೀಯ ತನಿಖಾ ದಳದ(ಎನ್ ಐಎ)ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ; ದೆಹಲಿ ಮೂಲದ ಉದ್ಯಮಿಯೊಬ್ಬರು ತಮಗೆ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದ ಹಿನ್ನಲೆಯಲ್ಲಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಸೇರಿದಂತೆ ಮೂವರು ರಾಷ್ಟ್ರೀಯ ತನಿಖಾ ದಳದ(ಎನ್ ಐಎ)ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.


ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಹಫೀಝ್ ಸಯೀದ್ ನಿಗೆ ಹಣ ಒದಗಿಸುವ ಕೇಸಿನಲ್ಲಿ ತಮ್ಮ ಹೆಸರನ್ನು ಸೇರಿಸದಂತೆ ಮನವಿ ಮಾಡಿಕೊಂಡಿದ್ದಕ್ಕೆ ತಮ್ಮಿಂದ ಅಧಿಕಾರಿ 2 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದರು ಎಂದು ಉದ್ಯಮಿ ದೂರು ನೀಡಿದ್ದರು.
ದೂರಿನ ಬಗ್ಗೆ ಸಮಗ್ರ ತನಿಖೆ ನಡೆಸಿದ ನಂತರ ಭಯೋತ್ಪಾದನಾ ನಿಗ್ರಹ ದಳದಿಂದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ.


ಅಧಿಕಾರಿಗಳ ವಿರುದ್ಧ ಅನುಚಿತ ವರ್ತನೆ ದೂರು ಸ್ವೀಕರಿಸಲಾಗಿದ್ದು ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಮಧ್ಯೆ, ನ್ಯಾಯಸಮ್ಮತ ತನಿಖೆ ನಡೆಸಲು ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಎನ್ಐಎ ವಕ್ತಾರರು ತಿಳಿಸಿದ್ದಾರೆ.


ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್ ಎ ತೊಯ್ಬಾ ಮುಖ್ಯಸ್ಥ ಹಫೀಝ್ ಸಯೀದ್ ನಡೆಸುತ್ತಿರುವ ಫಲಾಹ್-ಇ-ಇನ್ಸಾಯತ್ ಫೌಂಡೇಶನ್ ವಿರುದ್ಧ ತನಿಖೆ ನಡೆಸುತ್ತಿದ್ದ ಎಸ್ಪಿ ಮತ್ತು ಇಬ್ಬರು ಕಿರಿಯ ಅಧಿಕಾರಿಗಳ ವಿರುದ್ಧ ರಾಷ್ಟ್ರೀಯ ತನಿಖಾ ತಂಡಕ್ಕೆ ತಿಂಗಳ ಹಿಂದೆ ದೂರು ಬಂದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com