ಉತ್ತರಾಖಂಡ್: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಸಾಗಿಸುತ್ತಿದ್ದ ಹೆಲಿಕಾಪ್ಟರ್​ ಪತನ, ಮೂವರು ಸಾವು

ಉತ್ತರಾಖಂಡದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಸಾಗಿಸುತ್ತಿದ್ದ ಹೆಲಿಕಾಪ್ಟರ್ ಬುಧವಾರ ಪತನವಾಗಿದ್ದು, ದುರಂತದಲ್ಲಿ ಮೂವರು ರಕ್ಷಣಾ ಸಿಬ್ಬಂದಿ ಮೃತಪಟ್ಟಿದ್ದಾರೆ.
ಹೆಲಿಕಾಪ್ಟರ್ ಪತನ
ಹೆಲಿಕಾಪ್ಟರ್ ಪತನ

ಡೆಹ್ರಾಡೂನ್​: ಉತ್ತರಾಖಂಡದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಸಾಗಿಸುತ್ತಿದ್ದ ಹೆಲಿಕಾಪ್ಟರ್ ಬುಧವಾರ ಪತನವಾಗಿದ್ದು, ದುರಂತದಲ್ಲಿ ಮೂವರು ರಕ್ಷಣಾ ಸಿಬ್ಬಂದಿ ಮೃತಪಟ್ಟಿದ್ದಾರೆ.

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ.

ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಪರಿಹಾರ ಸಾಮಗ್ರಿಯನ್ನು ಹೆರಿಟೇಜ್​ ಏವಿಯೇಷನ್​ಗೆ ಸೇರಿದ ಹೆಲಿಕಾಪ್ಟರ್​ ನಲ್ಲಿ ಹೊತ್ತೊಯ್ಯಲಾಗುತ್ತಿತ್ತು. ಡೆಹ್ರಾಡೂನ್​ನಿಂದ ಪರಿಹಾರ ಸಾಮಗ್ರಿ ಹೊತ್ತ ಹೆಲಿಕಾಪ್ಟರ್​ ಉತ್ತರಾಕಾಶಿಯ ಅರ್ಕೋಟ್​ ಗ್ರಾಮದಲ್ಲಿ ಕೆಲವೊಂದು ಸಾಮಗ್ರಿಯನ್ನು ಇಳಿಸಿತ್ತು. ನಂತರ ಮೋಲ್ಡಿ ಗ್ರಾಮಕ್ಕೆ ಹೆಲಿಕಾಪ್ಟರ್​ ತೆರಳುತ್ತಿತ್ತು. ಈ ವೇಳೆ ಹೆಲಿಕಾಪ್ಟರ್​ ವಿದ್ಯುತ್​ ತಂತಿಗೆ ಡಿಕ್ಕಿ ಹೊಡೆದು ಪತನಗೊಂಡಿದೆ.

ದುರ್ಘಟನೆಯಲ್ಲಿ ಪೈಲಟ್​ಗಳಾದ ರಾಜ್​ಪಾಲ್​, ಕ್ಯಾಪ್ಟನ್​ ಲಾಲ್​ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ನಿವಾಸಿ ರಮೇಶ್​ ಸಾವರ್​ ಎಂಬುವವರು ಮೃತಪಟ್ಟಿದ್ದಾರೆ.

ಎಲ್ಲರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com