ಬಾಲಾಕೋಟ್ ವಾಯುದಾಳಿಯಿಂದ ಪತರಗುಟ್ಟಿದ್ದ ಪಾಕ್ ವಿರುದ್ಧ ಪಿಎಂ ಮೋದಿಯಿಂದ ಜಲಾಸ್ತ್ರ ಪ್ರಯೋಗ!

ಭಯೋತ್ಪಾದನೆಯನ್ನು ಮುಂದಿಟ್ಟುಕೊಂಡು ತನ್ನ ಕುತಂತ್ರ ಬುದ್ಧಿ ಪ್ರದರ್ಶಿಸುತ್ತಿರುವ ಪಾಕಿಸ್ತಾನಕ್ಕೆ ತಿರುಗೇಟು ನೀಡಲು ಭಾರತ ಈಗ ಜಲಾಸ್ತ್ರವನ್ನು ಪ್ರಯೋಗಿಸಲು ಮುಂದಾಗಿದೆ.
ಇಮ್ರಾನ್ ಖಾನ್-ನರೇಂದ್ರ ಮೋದಿ
ಇಮ್ರಾನ್ ಖಾನ್-ನರೇಂದ್ರ ಮೋದಿ

ನವದೆಹಲಿ: ಭಯೋತ್ಪಾದನೆಯನ್ನು ಮುಂದಿಟ್ಟುಕೊಂಡು ತನ್ನ ಕುತಂತ್ರ ಬುದ್ಧಿ ಪ್ರದರ್ಶಿಸುತ್ತಿರುವ ಪಾಕಿಸ್ತಾನಕ್ಕೆ ತಿರುಗೇಟು ನೀಡಲು ಭಾರತ ಈಗ ಜಲಾಸ್ತ್ರವನ್ನು ಪ್ರಯೋಗಿಸಲು ಮುಂದಾಗಿದೆ.

ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸಿ ವಿದ್ವಂಸಕ ಕೃತ್ಯಗಳನ್ನು ನಡೆಸಲು ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ನಿಲ್ಲಿಸಲು ಕೇಂದ್ರ ಸರ್ಕಾರ ಮುಂದಾಗಿತ್ತು. ಅದರಂತೆ ಇದೀಗ ಡ್ಯಾಂ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದ್ದಾರೆ.

ಇಂಡಸ್ ಒಪ್ಪಂದ ಉಲ್ಲಂಘಿಸದೆ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ನಿಲ್ಲಿಸುವ ಕಾರ್ಯ ಆರಂಭಗೊಂಡಿದೆ. ಪಾಕಿಸ್ತಾನಕ್ಕೆ ನಮ್ಮ ನೆಲದಿಂದ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ. ಈ ನೀರನ್ನು ಸಂಗ್ರಹಿಸಲು ಜಲಾಶಯವನ್ನು ನಿರ್ಮಿಸುತ್ತಿದ್ದೇವೆ. ನಂತರ ಕಾಲುವೆಗಳ ಮೂಲಕ ನೀರನ್ನು ಹರಿಸಲಾಗುತ್ತದೆ ಎಂದು ವಿವರಿಸಿದರು. 

ಕೇವಲ ವಿದ್ಯುತ್ ಉತ್ಪಾದನೆಗೆ ಮಾತ್ರ ಜಲಾಶಯ ನಿರ್ಮಿಸುತ್ತಿಲ್ಲ. ಮಳೆ ಕಡಿಮೆಯಾದ ಸಂದರ್ಭದಲ್ಲಿ ನೀರನ್ನು ಹರಿಸಲು ಈ ಡ್ಯಾನಂ ನಿರ್ಮಾಣ ಮಾಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರದ ಕ್ರಮಕ್ಕೆ ಶೆಖಾವತ್ ಸಮರ್ಥನೆ ನೀಡಿದ್ದಾರೆ.

ಇಂಡಸ್ ನದಿ ನೀರಿನ ಒಪ್ಪಂದದ ಪ್ರಕಾರ, ಸಟ್ಲೇಜ್, ರಾವಿ ಮತ್ತು ಬಿಯಾಸ್ ನದಿ ನೀರಿನ ಬಳಕೆ ಭಾರತಕ್ಕೆ ಮೀಸಲಾಗಿದ್ದರೆ, ಜೇಲಂ, ಚೀನಾಬ್ ಮತ್ತು ಇಂಡಸ್ ನದಿ ನೀರು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ. ಈ ಒಪ್ಪಂದದ ಪ್ರಕಾರ ಭಾರತಕ್ಕೆ ಮೀಸಲಾಗಿರುವ ಮೂರು ನದಿಗಳ ನೀರನ್ನು ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಗೆ ಬಳಸಬಹುದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com