ನ್ಯಾಯಾಲಯಕ್ಕೆ ಪಿ. ಚಿದಂಬರಂ ಹಾಜರುಪಡಿಸಿದ ಸಿಬಿಐ, ಐದು ದಿನ  ವಶಕ್ಕೆ ನೀಡುವಂತೆ ಮನವಿ

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಇಂದು ನ್ಯಾಯಾಲಯದಲ್ಲಿ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು. 
ಪಿ. ಚಿದಂಬರಂ
ಪಿ. ಚಿದಂಬರಂ

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಇಂದು ನ್ಯಾಯಾಲಯದಲ್ಲಿ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು. 

ವಿಶೇಷ ನ್ಯಾಯಾಧೀಶ  ಅಜಯ್ ಕುಮಾರ್ ಪ್ರಕರಣದ  ವಿಚಾರಣೆ ನಡೆಸುತ್ತಿದ್ದು, ಮಾಜಿ ರಕ್ಷಣಾ ಸಚಿವರನ್ನು ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಬಿಐ ಮನವಿ ಮಾಡಿತು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಿಬಿಐ ಪರ ವಾದ ಮಂಡಿಸಿ,  ಪಿ. ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿಲ್ಲ. ಯಾವುದೇ ತನಿಖೆಗೂ ಏನನ್ನೂ ಪ್ರತಿಕ್ರಿಯಿಸುತ್ತಿಲ್ಲ. ಮೌನ ಅವರ ಸಾಂವಿಧಾನಿಕ ಹಕ್ಕು, ಆದರೆ, ಯಾವುದಕ್ಕೂ ಪ್ರತಿಕ್ರಿಯಿಸುತ್ತಿಲ್ಲ ಎಂದರು.

ಇತರ ಆರೋಪಿಗಳೊಂದಿಗೆ ಪಿ. ಚಿದಂಬರಂ ಅವರನ್ನು ವಿಚಾರಣೆ ನಡೆಸುವ ಅಗತ್ಯವಿರುವುದರಿಂದ ಅವರನ್ನು ಸಿಬಿಐ ವಶಕ್ಕೆ ನೀಡುವಂತೆ ಮೆಹ್ತಾ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ಕೋರ್ಟ್ ರೂಮಿಗೆ ಆಗಮಿಸುತ್ತಿದ್ದಂತೆ ಪಿ. ಚಿದಂಬರಂ ಕಾಂಗ್ರೆಸ್ ನಾಯಕರು ಹಾಗೂ ಹಿರಿಯ ವಕೀಲರಾದ ಕಪೀಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಹಾಗೂ ವಿವೇಕ್ ಟಂಕಾ ಅವರೊಡನೆ ಮಾತನಾಡುತ್ತಿರುವ ದೃಶ್ಯ ಕಂಡುಬಂದಿತು.

ಪಿ. ಚಿದಂಬರಂ ಪತ್ನಿ ನಳಿನಿ ಹಾಗೂ ಕಾರ್ತಿ ಚಿದಂಬರಂ ಕೂಡಾ ಕೋರ್ಟ್ ರೂಮಿನಲ್ಲಿ ಕಂಡುಬಂದರು. ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com