ನವದೆಹಲಿ: ಜಂತರ್ ಮಂಥರ್ ಬಳಿ ಪ್ರತಿಭಟನೆ-ಕಾರ್ತಿ ಚಿದಂಬರಂ
ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ರಾಜಕೀಯ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಆರೋಪಿಸಿರುವ ಅವರ ಪುತ್ರ ಕಾರ್ತಿ ಚಿದಂಬರಂ ಜಂಥರ್ ಮಂತರ್ ಬಳಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.
Published: 22nd August 2019 10:38 AM | Last Updated: 22nd August 2019 10:48 AM | A+A A-

ಕಾರ್ತಿ ಚಿದಂಬರಂ
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ರಾಜಕೀಯ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಆರೋಪಿಸಿರುವ ಅವರ ಪುತ್ರ ಕಾರ್ತಿ ಚಿದಂಬರಂ ಜಂಥರ್ ಮಂತರ್ ಬಳಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.
ನಿಜವಾಗಿಯೂ ತಮ್ಮ ತಂದೆಯನ್ನು ಟಾರ್ಗೆಟ್ ಮಾಡಿಲ್ಲ. ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿಕೊಂಡು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಜಂತರ್ ಮಂಥರ್ ಬಳಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾನೂನು ತಜ್ಞರಾದ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್, ಸಲ್ಮಾನ್ ಖುರ್ಷಿದ್ ಅವರನ್ನೊಳಗೊಂಡ ತಂಡ ಹರಸಾಹಸಪಟ್ಟರೂ ಪಿ. ಚಿದಂಬರಂ ಅವರನ್ನು ಸಿಬಿಐ ಬಂಧನದಿಂದ ತಪ್ಪಿಸಲು ಸಾಧ್ಯವಾಗಿಲ್ಲ. ಭ್ರಷ್ಟಾಚಾರ ಪ್ರಕರಣದಲ್ಲಿ ನಿನ್ನೆ ರಾತ್ರಿ ಬಂಧಿಸಲಾಗಿತ್ತು.