ತ್ರಿವಳಿ ತಲಾಖ್ ಕಾನೂನಿನ ಸಂವಿಧಾನಿಕ ಸಿಂಧುತ್ವ ಪರಿಶೀಲಿಸಿಲು ಸುಪ್ರೀಂ ಒಪ್ಪಿಗೆ, ಕೇಂದ್ರಕ್ಕೆ ನೋಟಿಸ್

ತ್ರಿವಳಿ ತಲಾಖ್ ಅನ್ನು ಅಪರಾಧೀಕರಣಗೊಳಿಸುವ "ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ 2019"ರ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ಸೂಚಿಸಿದ್ದು,
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ತ್ರಿವಳಿ ತಲಾಖ್ ಅನ್ನು ಅಪರಾಧೀಕರಣಗೊಳಿಸುವ "ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ 2019"ರ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ಸೂಚಿಸಿದ್ದು, ಈ ಸಂಬಂಧ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ತ್ರಿವಳಿ ತಲಾಖ್ ಕಾನೂನಿನ ಸಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎನ್ ವಿ ರಮಣ ಮತ್ತು ಅಜಯ್ ರಾಸ್ತೋಗಿ ಅವರು, ಈ ಬಗ್ಗೆ ನಾವು ಪರಿಶೀಲಿಸುತ್ತೇವೆ ಎಂದು ಹೇಳಿದೆ.

ತ್ರಿವಳಿ ತಲಾಖ್ ನಿಷೇಧ ಮಸೂದೆಯು ಸಂವಿಧಾನದ ನಿಯಮಗಳನ್ನು ಉಲ್ಲಂಘಿಸುತ್ತಿದೆ. ಆದ್ದರಿಂದ ಈ ಮಸೂದೆಯನ್ನು "ಅಸಾಂವಿಧಾನಿಕ" ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಧಾರ್ಮಿಕ ಆಚರಣೆಯನ್ನು ಅನೂರ್ಜಿತವೆಂದು ಘೋಷಿಸಿದರೂ ಅದು ಇನ್ನೂ ನಡೆಯುತ್ತಿರುವುದರ ಬಗ್ಗೆ ನಮಗೆ ಅನುಮಾನವಿದೆ. ಇದು ವರದಕ್ಷಿಣೆ ತರಹದ ಅಪರಾಧವಲ್ಲವೇ?" ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್, ಸುಪ್ರೀಂ ಕೋರ್ಟ್ ಈಗಾಗಲೇ ತ್ರಿವಳಿ ತಲಾಖ್ ಅನ್ನು ಅನೂರ್ಜಿತವೆಂದು ಘೋಷಿಸಿದ್ದು, ಈ ಪ್ರಕರಣವನ್ನು ಅಪರಾಧೀಕರಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com