ಕಣಿವೆ ರಾಜ್ಯ ಪ್ರಕ್ಷುಬ್ಧ: ಪರಿಸ್ಥಿತಿ ನಿಯಂತ್ರಣಕ್ಕೆ ಕಾಶ್ಮೀರ ಮಾಜಿ ಸಿಎಂಗಳ ಮೊರೆ ಹೋದ ಗೃಹ ಸಚಿವಾಲಯ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ವಿಧಿ 370 ರದ್ದುಗೊಳಿಸಿದ ನಂತರದಲ್ಲಿ ಕಣಿವೆ ರಾಜ್ಯದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಕಾಶ್ಮೀರ ಮಾಜಿ ಸಿಎಂಗಳ ಸಲಹೆ ಕೇಳಿದೆ.

Published: 25th August 2019 07:00 PM  |   Last Updated: 25th August 2019 07:51 PM   |  A+A-


MHA ‘reaches out’ to Omar Abdullah, Mehbooba Mufti: Sources

ಸಂಗ್ರಹ ಚಿತ್ರ

Posted By : Srinivasamurthy VN
Source : Online Desk

ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಅವರೊಂದಿಗೆ ಮಹತ್ವದ ಸಭೆ, ಷರತ್ತುಬದ್ದ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ವಿಧಿ 370 ರದ್ದುಗೊಳಿಸಿದ ನಂತರದಲ್ಲಿ ಕಣಿವೆ ರಾಜ್ಯದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಕಾಶ್ಮೀರ ಮಾಜಿ ಸಿಎಂಗಳ ಸಲಹೆ ಕೇಳಿದೆ.

ಕಾಶ್ಮೀರ ಕಣಿವೆಯಲ್ಲಿ ಉಂಟಾಗಿರುವ ತೀವ್ರ ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ನಡೆಸುತ್ತಿದೆ. ಇದೀಗ ಕಣಿವೆಯಲ್ಲಿ ಶಾಂತಿ ಮರುಸ್ಥಾಪಿಸುವ ನಿಟ್ಟಿನಲ್ಲಿ ಸಹಕಾರ ಕೋರಿ ಗೃಹಬಂಧನದಲ್ಲಿರುವ ಮಾಜಿ ಸಿಎಂಗಳಾದ ಓಮರ್​ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಕೇಂದ್ರ ಗೃಹ ಸಚಿವಾಲಯ ಸಂಪರ್ಕಿಸಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದ್ದು, ಕೇಂದ್ರ ಗೃಹ ಸಚಿವಾಲಯದ ಪರವಾಗಿ ಓಮರ್​ ಮತ್ತು ಮೆಹಬೂಬಾ ಅವರನ್ನು ಬೇಹುಗಾರಿಕಾ ಪಡೆ ಅಧಿಕಾರಿಗಳು ಸಂಪರ್ಕಿಸಿದ್ದಾರೆ. ಬಿಡುಗಡೆ ಬಳಿಕ ರಾಜಕೀಯ ಸಭೆಗಳನ್ನು ನಡೆಸುವುದಿಲ್ಲ. ಕಾಶ್ಮೀರದಲ್ಲಿನ ಹೊಸ ರಾಜಕೀಯ ಬೆಳವಣಿಗೆ ಕುರಿತು ಏನೊಂದು ಪ್ರತಿಕ್ರಿಯಿಸುವುದಿಲ್ಲ ಎಂಬ ಷರತ್ತುಗಳಿಗೆ ಒಪ್ಪಿಕೊಂಡರೆ ತಮ್ಮನ್ನು ಗೃಹ ಬಂಧನ ಮುಕ್ತಗೊಳಿಸುವುದಾಗಿ ಸರ್ಕಾರ ಹೇಳಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ವಿಶೇಷ ಅಧಿಕಾರ ನೀಡುತ್ತಿದ್ದ ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ರದ್ದುಗೊಳಿಸಿ ಆಗಸ್ಟ್ 5ರಂದು ಸುಗ್ರೀವಾಜ್ಞೆ ಹೊರಡಿಸಿತ್ತು. ಬಳಿಕ ಉಭಯ ಸದನಗಳಿಂದಲೂ ಅನುಮೋದನೆ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕಣಿವೆಯಲ್ಲಿ ಅಶಾಂತಿಯನ್ನುಂಟು ಮಾಡಬಹುದು ಎಂಬ ಕಾರಣಕ್ಕಾಗಿ ಓಮರ್​ ಅಬ್ದುಲ್ಲಾ, ಮಹೆಬೂಬಾ ಮುಫ್ತಿ ಸೇರಿ ಹಲವು ಮಾಜಿ ಸಿಎಂಗಳನ್ನು ಗೃಹ ಬಂಧನದಲ್ಲಿರಿಸಿತ್ತು.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp