ಚಿದಂಬರಂಗೆ ತಪ್ಪದ ಸಂಕಷ್ಟ: ಆಗಸ್ಟ್ 30ರವರೆಗೆ ಸಿಬಿಐ ವಶಕ್ಕೆ!

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ಮತ್ತೆ ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಬಿಐ ಅಧಿಕಾರಿಗಳ...
ಪಿ ಚಿದಂಬರಂ
ಪಿ ಚಿದಂಬರಂ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ಮತ್ತೆ ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಬಿಐ ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿದ ಸಿಬಿಐ ವಿಶೇಷ ಕೋರ್ಟ್ ಆಗಸ್ಟ್ 30ರವರೆಗೆ ಕಸ್ಟಡಿಯನ್ನು ಮುಂದುವರೆಸಿ ಆದೇಶಿಸಿದೆ. 

ಕಳೆದ ಬುಧವಾರ ರಾತ್ರಿ ಚಿದಂಬರಂ ನಿವಾಸದಿಂದ ಅವರನ್ನು ಸಿಬಿಐ ಬಂಧಿಸಿ ಆಗಸ್ಟ್ 26 ರವರೆಗೆ ವಶಕ್ಕೆ ಪಡೆದಿತ್ತು. ಇಂದಿಗೆ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಐದು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ. 

ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಸಹ ಅರ್ಜಿಯನ್ನು ತಳ್ಳಿಹಾಕಿತ್ತು.

ಪಿ.ಚಿದಂಬರಂ ಅವರನ್ನು ಇಂದು ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಹಾಜರುಪಡಿಸಿತ್ತು. ಮೂರು ಗಂಟೆಗಳ ಕಾಲ ನಡೆದ ವಿಚಾರಣೆಯ ನಂತರ, ಯಾಲಯವು ಆಗಸ್ಟ್ 26 ರವರೆಗೆ ಕಾಂಗ್ರೆಸ್ ನಾಯಕನನ್ನು ಕೇಂದ್ರ ತನಿಖಾ ಸಂಸ್ಥೆಯ ಕಸ್ಟಡಿಗೆ ನೀಡಿತು. ಸಿಬಿಐ ವಕ್ತಾರರು ಈ ಹಿಂದೆ ಚಿದಂಬರಂ ಅವರನ್ನು ನ್ಯಾಯಾಲಯ ಹೊರಡಿಸಿದ ವಾರಂಟ್‌ನ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದರು.

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬೃಹನ್ನಾಟಕದ ನಂತರ ಮಾಜಿ ಹಣಕಾಸು ಸಚಿವರ ಬಂಧನವಾಗಿದ್ದು ಗುರುವಾರ ಸಿಬಿಐ ಚಿದಂಬರಂ ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯವನ್ನು ಕೋರಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com