ಸಂವಿಧಾನ ವಿಧಿ 370 ರದ್ದು ಪ್ರಶ್ನಿಸಿ ಅರ್ಜಿ; ಅಕ್ಟೋಬರ್ ಗೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ 

ಸಂವಿಧಾನ ವಿಧಿ 370ನ್ನು ರದ್ದುಪಡಿಸುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಸಾಂವಿಧಾನಿಕ ಮಾನ್ಯತೆಯಲ್ಲಿ ತರಲಾದ ಬದಲಾವಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿದ್ದ ಒಂದು ಗುಂಪಿನ ಅರ್ಜಿ ವಿಚಾರಣೆಯನ್ನು ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠಕ್ಕೆ ಉಲ್ಲೇಖಿಸಲಾಗಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ಸೀತಾರಾಮ್ ಯೆಚೂರಿಗೆ ಕಾಶ್ಮೀರಕ್ಕೆ ಭೇಟಿ ನೀಡಲು ಅವಕಾಶ 

ನವದೆಹಲಿ: ಸಂವಿಧಾನ ವಿಧಿ 370ನ್ನು ರದ್ದುಪಡಿಸುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಸಾಂವಿಧಾನಿಕ ಮಾನ್ಯತೆಯಲ್ಲಿ ತರಲಾದ ಬದಲಾವಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿದ್ದ ಒಂದು ಗುಂಪಿನ ಅರ್ಜಿ ವಿಚಾರಣೆಯನ್ನು ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠಕ್ಕೆ ಉಲ್ಲೇಖಿಸಲಾಗಿದೆ. 


ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ಆಡಳಿತಕ್ಕೆ ನೊಟೀಸ್ ಜಾರಿಗೊಳಿಸಿರುವ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಅಕ್ಟೋಬರ್ ಗೆ ಮುಂದೂಡಿದೆ. 370 ನೇ ವಿಧಿಯನ್ನು ರದ್ದುಪಡಿಸಿರುವುದರ ವಿರುದ್ಧ ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ನ್ಯಾಯಪೀಠ ಆಲಿಸಲಿದೆ.


ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮತ್ತು ಸಾಲಿಸಿಟರ್ ಜನರಲ್ ತುಶಾರ್ ಮೆಹ್ತಾ ಕೋರ್ಟ್ ಗೆ ಇಂದು ವಿಚಾರಣೆಗೆ ಹಾಜರಾಗಿರುವುದರಿಂದ ಸರ್ಕಾರಕ್ಕೆ ನೊಟೀಸ್ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಕೇಂದ್ರದ ವಾದವನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಒಪ್ಪಲಿಲ್ಲ. ನಾವಿದನ್ನು ಆವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುತ್ತೇವೆ ಎಂದು ಹೇಳಿದರು. 


ಕೋರ್ಟ್ ಹೇಳಿರುವುದನ್ನು ವಿಶ್ವಸಂಸ್ಥೆಗೆ ಈ ಹಿಂದೆ ಕಳುಹಿಸಲಾಗಿದೆ ಎಂದು ಅಟೊರ್ನಿ ಜನರಲ್ ವಾದಿಸಿದರು. ಎರಡೂ ಕಡೆಯ ವಾದ ವಿವಾದ ಆಲಿಸಿದ ನ್ಯಾಯಪೀಠ, ನಮಗೆ ಏನು ಮಾಡಬೇಕು ಎಂದು ಗೊತ್ತಿದೆ. ನಾವು ಆದೇಶ ಹೊರಡಿಸಿದ್ದೇವೆ, ಅದನ್ನು ಬದಲಾಯಿಸಲು ಸಾಧ್ಯವಿಲ್ಲ, ಎಲ್ಲಾ ವಿಚಾರಣೆಗಳನ್ನು ಅಕ್ಟೋಬರ್ ಮೊದಲ ವಾರ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿತು.


ಈ ಮಧ್ಯೆ ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಮತ್ತು ಕಾಶ್ಮೀರ ವಿದ್ಯಾರ್ಥಿಗಳಿಗೆ ಕಾಶ್ಮೀರಕ್ಕೆ ಹೋಗಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಸೀತಾರಾಮ್ ಯೆಚೂರಿ ಜಮ್ಮು-ಕಾಶ್ಮೀರದಲ್ಲಿ ತಮ್ಮ ಪಕ್ಷದ ನಾಯಕ, ಮಾಜಿ ಶಾಸಕ ಮೊಹಮ್ಮದ್ ಯೂಸಫ್ ಟರಿಗಮಿ ಅವರನ್ನು ಭೇಟಿ ಮಾಡಲು ಅವಕಾಶ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 


ಈ ಅವಕಾಶವನ್ನು ಟರಿಗಮಿ ಭೇಟಿಗೆ ಮಾತ್ರವೇ ಹೊರತು ಬೇರಾವ ರಾಜಕೀಯ ಉದ್ದೇಶಗಳಿಗೆ ಬಳಸಬಾರದು ಎಂದು ನ್ಯಾಯಪೀಠ ಷರತ್ತು ವಿಧಿಸಿದೆ.

ಸಚಿವರ ತಂಡ: ಈ ಮಧ್ಯೆ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಗಮನಹರಿಸಲು ಕೇಂದ್ರ ಸರ್ಕಾರ ಇಂದು ಸಚಿವರ ತಂಡವನ್ನು ರಚಿಸಿದೆ. 
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಸಾಮಾಜಿಕ ನ್ಯಾಯ ಸಚಿವ ತಾವರ್ ಚಂದ್ ಗೆಹ್ಲೊಟ್, ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್, ಪ್ರಧಾನ ಮಂತ್ರಿ ಕಾರ್ಯಾಲಯ ಸಚಿವ ಜಿತೇಂದ್ರ ಸಿಂಗ್ ತಂಡದಲ್ಲಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com