ವಿಧಿ 370 ರದ್ಧತಿ ಬೆನ್ನಲ್ಲೇ, ಕಾಶ್ಮೀರ ಯುವಕರಿಗೆ 50 ಸಾವಿರ ಉದ್ಯೋಗ ಘೋಷಿಸಿದ ಸರ್ಕಾರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ.
ಈ ಕುರಿತಂತೆ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ. ಮುಂದಿನ 2 ಅಥವಾ 3 ತಿಂಗಳುಗಳಲ್ಲಿ ಯುವಕರಿಗೆ ಉದ್ಯೋಗ ನೀಡುವ ವಿಶ್ವಾಸವಿದೆ. ಈ ಕುರಿತಂತೆ ತಾವು ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲೇ ಉದ್ಯೋಗ ಭರ್ತಿ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ಯುವಕರು ಹೆಚ್ಚಿನ ಮಟ್ಟದಲ್ಲಿ ಪಾಲ್ಗೊಂಡು ಅರ್ಹರು ಉದ್ಯೋಗ ಪಡೆಯಬೇಕು ಎಂದು ರಾಜ್ಯಪಾಲರು ಮನವಿ ಮಾಡಿಕೊಂಡರು. ಇದಕ್ಕೂ ಮುನ್ನ ಕೇಂದ್ರ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತು ಉದ್ಯಮಶೀಲತೆ ಇಲಾಖೆ ಕಾರ್ಯದರ್ಶಿ ಡಾ. ಎಂಪಿ ಕೃಷ್ಣನ್ ಅವರು ಸತ್ಯಪಾಲ್ ಮಲ್ಲಿಕ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಚರ್ಚಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ