ಕೇಂದ್ರ ಸಚಿವ ಸಂಪುಟ ಸಭೆ: ಜಮ್ಮು-ಕಾಶ್ಮೀರ ಕುರಿತು ಕೇಂದ್ರದಿಂದ ಮಹತ್ವದ ನಿರ್ಧಾರ, ದೊಡ್ಡ ಪ್ಯಾಕೇಜ್ ಘೋಷಣೆ ಸಾಧ್ಯತೆ!

ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ಅನ್ನು ರದ್ಜು ಪಡಿಸಿ ಕಾಶ್ಮೀರಿಗರ ಕೆಂಗಣ್ಣಿಗೆ ಗುರಿಯಾಗಿರುವ ಕೇಂದ್ರದ ಮೋದಿ ಸರ್ಕಾರ ತನ್ನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ಅನ್ನು ರದ್ಜು ಪಡಿಸಿ ಕಾಶ್ಮೀರಿಗರ ಕೆಂಗಣ್ಣಿಗೆ ಗುರಿಯಾಗಿರುವ ಕೇಂದ್ರದ ಮೋದಿ ಸರ್ಕಾರ ತನ್ನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈ ಕುರಿತಂತೆ ಖಾಸಗಿ ಮಾಧ್ಯಮ ವರದಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಸಂಪುಟ ಸಭೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ವಿಚಾರವಾಗಿ ನಡೆಯುವ ಈ ಸಭೆಯ ನಂತರ ದೊಡ್ಡ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಮೋದಿ ಸರ್ಕಾರ ದೊಡ್ಡ ಪ್ಯಾಕೇಜ್ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸುವ ಕ್ರಮಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ವರದಿಯಲ್ಲಿ ಹೇಳಲಾಗಿದೆ. 

ಇನ್ನು ಸಚಿವ ಸಂಪುಟ ಸಭೆಗೂ ಮುನ್ನ ಇಂದು 2019 ರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ ಕುರಿತು ಚರ್ಚಿಸಲು ಗೃಹ ಸಚಿವಾಲಯದ ಸಚಿವರ ಸಭೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಹೊಸದಾಗಿ ನೇಮಕಗೊಂಡ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ವಹಿಸಿದ್ದರು. ಮಧ್ಯಾಹ್ನ ನಂತರ ಪ್ರಾರಂಭವಾದ ಸಭೆಯಲ್ಲಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಕೂಡ ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com