ಪಿ.ಚಿದಂಬರಂ ಜಾಮೀನು ಅರ್ಜಿ ತಿರಸ್ಕರಿಸಿದ್ದ ನ್ಯಾಯಾಧೀಶರಿಗೆ ನ್ಯಾಯಮಂಡಳಿ ಅಧ್ಯಕ್ಷ ಸ್ಥಾನ!

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುನಿಲ್ ಗೌರ್ ಅವರನ್ನು ನ್ಯಾಯಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಜಡ್ಡ್ ಸುನಿಲ್ ಗೌರ್
ಜಡ್ಡ್ ಸುನಿಲ್ ಗೌರ್

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುನಿಲ್ ಗೌರ್ ಅವರನ್ನು ನ್ಯಾಯಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುನಿಲ್ ಗೌರ್ ಅವರು ಪಿಎಂಎಲ್ಎನ್ ಟ್ರಿಬ್ಯೂನಲ್ ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈಗ್ಗೆ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಜಾಮೀನು ಅರ್ಜಿಯನ್ನು ಸುನಿಲ್ ಗೌರ್ ತಿರಸ್ಕರಿಸಿದ್ದರು. ಇದಾದ ಎರಡು ದಿನಗಳ ನಂತರ ಆಗಸ್ಟ್ 23 ರಂದು ಸುನಿಲ್ ಗೌರ್ ಅವರು ನಿವೃತ್ತರಾದರು.

ಈ ಹಿಂದೆ ನ್ಯಾಯಮೂರ್ತಿ ಸುನಿಲ್ ಗೌರ್ ಹಲವಾರು ಉನ್ನತ ಪ್ರಕರಣಗಳ ವಿಚಾರಣೆ ನಡೆಸಿದ್ದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನ ಉನ್ನತ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅವರು ಡೆಕ್ ಗಳನ್ನು ತೆರವುಗೊಳಿಸುವ ಆದೇಶವನ್ನೂ ನೀಡಿದ್ದರು. ಅಗಸ್ಟಾ ವೆಸ್ಟ್‌ಲ್ಯಾಂಡ್ ಚಾಪರ್ ಹಗರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸೋದರಳಿಯ ಉದ್ಯಮಿ ರತುಲ್ ಪುರಿಗೆ ಕಳೆದ ವಾರ ಅವರು ಜಾಮೀನು ನಿರಾಕರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com