ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ: ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ವಿದೇಶಿ ನೇರ ಹೂಡಿಕೆಯಲ್ಲಿ ವಿದೇಶಿ ಸಿಂಗಲ್ ಬ್ರಾಂಡ್​ ವ್ಯಾಪಾರಿಗಳಿಗೆ ಬುಧವಾರ ಕೇಂದ್ರ ಸರ್ಕಾರ ನಿಯಮ ಸಡಿಲಿಕೆ ಮಾಡಿದೆ. ಅಂತೆಯೇ ಗುತ್ತಿಗೆ ಉತ್ಪಾದನೆ ಮತ್ತು ಕಲ್ಲಿದ್ದಲು ಗಣಿಗಾರಿಕೆಗೆ ವಿದೇಶ ಹೂಡಿಕೆಗೆ ಅವಕಾಶ ನೀಡಿದೆ.

ಇದೇ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್​ ಗೋಯೆಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಈ ನಿರ್ಧಾರ ತೆಗೆದುಕೊಂಡಿದೆ. ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಬಂಧಿತ ಮೂಲಸೌಕರ್ಯದಲ್ಲಿ ಶೇ.100ರಷ್ಟು ವಿದೇಶಿ ನೇರ ಹೂಡಿಕೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು. ಅಂತೆಯೇ ದೇಶೀಯ ಉತ್ಪಾದನೆ ಹೆಚ್ಚಿಸಲು, ಎಫ್​ಡಿಐನಲ್ಲಿ ಸ್ವಯಂಚಾಲಿತ ಮಾರ್ಗದಡಿ ಗುತ್ತಿಗೆ ಉತ್ಪಾದನೆಯಲ್ಲಿ ಶೇ.100ರಷ್ಟು ವಿದೇಶಿ ಹೂಡಿಕೆಗೆ ಅವಕಾಶ ನೀಡಲಾಗಿದೆ ಇದಲ್ಲದೆ ಡಿಜಿಟಲ್​ ಮಾಧ್ಯಮದಲ್ಲಿ ಶೇ.26ಎಷ್ಟು ಎಫ್​ಡಿಐಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಎಫ್​ಡಿಐ ಮೇಲೆ ಸಿಂಗಲ್​ ಬ್ರಾಂಡ್​ ವ್ಯಾಪಾರಿಗಳಿಗೆ ಶೇ.30ರಷ್ಟು ದೇಶೀಯ ಸಂಪನ್ಮೂಲವನ್ನು ಬಳಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಸಿಂಗಲ್​ ಬ್ರಾಂಡ್​ ವ್ಯಾಪಾರಿಗಳು ಆನ್ ಲೈನ್​ನಲ್ಲಿ ವ್ಯಾಪಾರ ಆರಂಭಿಸಬಹುದಾಗಿದೆ ಎಂದು ಗೋಯಲ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com