ಜಮ್ಮು-ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ: ರಾಹುಲ್ ಗಾಂಧಿ 

ಕಾಶ್ಮೀರ ಭಾರತದ ಆಂತರಿಕ ವಿಷಯವಾಗಿದ್ದು ಇದರಲ್ಲಿ ಪಾಕಿಸ್ತಾನ ಅಥವಾ ಬೇರಾವುದೇ ದೇಶಕ್ಕೆ ಮಧ್ಯೆ ಪ್ರವೇಶಿಸುವ ಅವಕಾಶವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಜಮ್ಮು-ಕಾಶ್ಮೀರ ವಿಚಾರದಲ್ಲಿ ವರಸೆ ಬದಲಿಸಿದ ಕಾಂಗ್ರೆಸ್ ನಾಯಕರು 

ನವದೆಹಲಿ; ಕಾಶ್ಮೀರ ಭಾರತದ ಆಂತರಿಕ ವಿಷಯವಾಗಿದ್ದು ಇದರಲ್ಲಿ ಪಾಕಿಸ್ತಾನ ಅಥವಾ ಬೇರಾವುದೇ ದೇಶಕ್ಕೆ ಮಧ್ಯೆ ಪ್ರವೇಶಿಸುವ ಅವಕಾಶವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಹಲವು ವಿಷಯಗಳನ್ನು ನಾನು ಒಪ್ಪುವುದಿಲ್ಲ. ಆದರೆ ಈ ವಿಷಯದಲ್ಲಿ ಸ್ಪಷ್ಟವಾಗಿ ಹೇಳುತ್ತಿದ್ದೇನೆ, ಕಾಶ್ಮೀರ ಭಾರತದ ಆಂತರಿಕ ವಿಷಯವಾಗಿದ್ದು ಅದರಲ್ಲಿ ಪಾಕಿಸ್ತಾನಕ್ಕಾಗಲಿ ಅಥವಾ ಬೇರಾವುದೇ ದೇಶಕ್ಕಾಗಲಿ ಮಧ್ಯಪ್ರವೇಶಿಸಲು ಅವಕಾಶವಿಲ್ಲ ಎಂದು ಹೇಳಿದರು.


ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದೆ. ವಿಶ್ವಾದ್ಯಂತ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ಬೆಂಬಲ ಮತ್ತು ಪ್ರಚೋದನೆಯಿಂದ ಅಲ್ಲಿ ಹಿಂಸಾಚಾರ ನಡೆಯುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು ರಾಹುಲ್ ಗಾಂಧಿ.


ಇವರ ಮಾತನ್ನು ಬೆಂಬಲಿಸಿರುವ ಮತ್ತೊಬ್ಬ ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೆವಾಲಾ, ಜಮ್ಮು-ಕಾಶ್ಮೀರ ಮತ್ತು ಲಡಾಕ್ ಎಂದೆಂದಿಗೂ ಭಾರತದ ಆಂತರಿಕ ಭಾಗ, ಈ ಬಗ್ಗೆ ವಿಶ್ವದಲ್ಲಿ ಯಾರಿಗೂ ಸಂಶಯವೇ ಬೇಡ, ಪಾಕಿಸ್ತಾನದ ಎರಡು ಮುಖ ಇದರಿಂದ ಬಹಿರಂಗವಾಗಿದೆ ಎಂದಿದ್ದಾರೆ. 

ಜಮ್ಮು-ಕಾಶ್ಮೀರ ವಿಚಾರದಲ್ಲಿ ಭಾರತ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ವಿಶ್ವಸಂಸ್ಥೆಗೆ ಪಾಕಿಸ್ತಾನ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ನಾವು ಕೇಳಿದ್ದೇವೆ. ಅದರಲ್ಲಿ ಪಾಕಿಸ್ತಾನ ಬೇಕೆಂದೇ ರಾಹುಲ್ ಗಾಂಧಿಯವರ ಹೆಸರನ್ನು ತಂದಿದೆ, ಈ ಮೂಲಕ ಪಾಕಿಸ್ತಾನ ಉದ್ದೇಶಪೂರ್ವಕವಾಗಿ ಸುಳ್ಳುಸುದ್ದಿಯನ್ನು ಹಬ್ಬಿಸುತ್ತಿದೆ ಎಂದರು. ಈ ಹಿಂದೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಮೋದಿ ಸರ್ಕಾರ ಸಂವಿಧಾನ ವಿಧಿ 370ನ್ನು ರದ್ದುಪಡಿಸಿರುವುದನ್ನು ತೀವ್ರವಾಗಿ ವಿರೋಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com