ಪತ್ರಕರ್ತರಿಗೆ ನಿರ್ಬಂಧ ಪ್ರಶ್ನಿಸಿ ಅರ್ಜಿ; ಕೇಂದ್ರ, ಜಮ್ಮು-ಕಾಶ್ಮೀರ ಆಡಳಿತಕ್ಕೆ  'ಸುಪ್ರೀಂ' ನೊಟೀಸ್ 

ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ನಂತರ ಪತ್ರಕರ್ತರ ಮೇಲೆ ಹೇರಲಾಗಿರುವ ನಿರ್ಬಂಧವನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ಆಡಳಿತದ ಪ್ರತಿಕ್ರಿಯೆ ಕೋರಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ನಂತರ ಪತ್ರಕರ್ತರ ಮೇಲೆ ಹೇರಲಾಗಿರುವ ನಿರ್ಬಂಧವನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ಆಡಳಿತದ ಪ್ರತಿಕ್ರಿಯೆ ಕೋರಿದೆ.


ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ, ಕಾಶ್ಮೀರ ಟೈಮ್ಸ್ ಕಾರ್ಯಕಾರಿ ಸಂಪಾದಕಿ ಅನುರಾಧ ಭಾಶಿನ್ ಸಲ್ಲಿಸಿದ್ದ ಮನವಿಗೆ ಸಂಬಂಧಪಟ್ಟಂತೆ ನೊಟೀಸ್ ಜಾರಿ ಮಾಡಿ ಇನ್ನು ಒಂದು ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.


ಜಮ್ಮು-ಕಾಶ್ಮೀರದಲ್ಲಿ ಮಾಧ್ಯಮಗಳಿಗೆ ಉತ್ತಮ ವಾತಾವರಣ ಕಲ್ಪಿಸಿ ತಮ್ಮ ವೃತ್ತಿಪರತೆಯನ್ನು ಹೆಚ್ಚಿಸಿಕೊಳ್ಳಲು ಮೊಬೈಲ್, ಇಂಟರ್ನೆಟ್ ಸೇವೆಗಳು ಸೇರಿದಂತೆ ಎಲ್ಲಾ ರೀತಿಯ ಸಂವಹನ ವಿಧಾನಗಳನ್ನು ಮರುಸ್ಥಾಪಿಸಲು ಆದೇಶ ನೀಡುವಂತೆ ಅನುರಾಧ ಬಾಶಿನ್ ಅರ್ಜಿಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com