ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ 

ಪ್ರಧಾನಿ ನರೇಂದ್ರ ಮೋದಿ ಆ.29 ರಂದು ರಾಷ್ಟ್ರಾದ್ಯಂತ ಫಿಟ್ ಇಂಡಿಯಾ ಚಳುವಳಿಗೆ ಚಾಲನೆ ನೀಡಲಿದ್ದಾರೆ. 
ಫಿಟ್ ಇಂಡಿಯಾ ಚಳುವಳಿಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
ಫಿಟ್ ಇಂಡಿಯಾ ಚಳುವಳಿಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆ.29 ರಂದು ರಾಷ್ಟ್ರಾದ್ಯಂತ ಫಿಟ್ ಇಂಡಿಯಾ ಚಳುವಳಿಗೆ ಚಾಲನೆ ನೀಡಲಿದ್ದಾರೆ. 

ಬೆಳಿಗ್ಗೆ 10 ಕ್ಕೆ ಇಂದಿರಾ ಗಾಂಧಿ ಸ್ಟೇಡಿಯಂ ಕಾಂಪ್ಲೆಕ್ಸ್ ನಲ್ಲಿ ಮೋದಿ ಈ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಚಾಲನೆ ನೀಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಫಿಟ್ನೆಸ್ ಪ್ಲೆಡ್ಜ್ ನ್ನು ಬೋಧನೆ ಮಾಡುವ ನಿರೀಕ್ಷೆ ಇದೆ. 

ಕಾರ್ಯಕ್ರಮಕ್ಕೆ ಕೆಲವೇ ಗಂಟೆಗಳ ಮುನ್ನ ಕ್ರೀಡಾ ಹಾಗೂ ಯುವಜನ ಖಾತೆ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದು, ಫಿಟ್ ಇಂಡಿಯಾ ಮೂಮೆಂಟ್ ನಲ್ಲಿ ಭಾಗವಹಿಸಲು ಸಮಾಜದ ಎಲ್ಲಾ ವರ್ಗಗಳಿಂದ ಅಪಾರ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಆ.29 ರಂದು ಪ್ರಧಾನಿ ಮೋದಿ ಫಿಟ್ ಇಂಡಿಯಾ ಮೂಮೆಂಟ್ ಗೆ ಚಾಲನೆ ನೀಡಲಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com