ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಮಂಡಳಿಗೆ ನಾಲ್ವರ ಹೆಸರು

ಸುಪ್ರೀಂ ಕೋರ್ಟ್ ನ್ಯಾಯಧೀಶರ ಮಂಡಳಿಗೆ ನಾಲ್ಕು ಹೊಸ ನ್ಯಾಯಾಧೀಶರ ಹೆಸರು ಶಿಫಾರಸು ಮಾಡಲಾಗಿದ್ದು, ಈಗ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಬಲವು 34ಕ್ಕೆ ಏರಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಧೀಶರ ಮಂಡಳಿಗೆ ನಾಲ್ಕು ಹೊಸ ನ್ಯಾಯಾಧೀಶರ ಹೆಸರು ಶಿಫಾರಸು ಮಾಡಲಾಗಿದ್ದು, ಈಗ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಬಲವು 34ಕ್ಕೆ ಏರಲಿದೆ.

ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿ.ರಾಮಸುಬ್ರಮಣಿಯನ್, ಹೃಷಿಕೇಶ ರಾಯ್ (ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ), ಕೃಷ್ಣ ಮುರಾರಿ (ಮುಖ್ಯ ನ್ಯಾಯಮೂರ್ತಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್) ಮತ್ತು ಎಸ್.ರವೀಂದ್ರ ಭಟ್ (ಮುಖ್ಯ ನ್ಯಾಯಮೂರ್ತಿ, ರಾಜಸ್ಥಾನ ಹೈಕೋರ್ಟ್) ಅವರನ್ನು ನೇಮಕ ಮಾಡಲು ಮಂಡಳಿ ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿದೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಂ ಸಪ್ರೆ ಅವರು ನಿವೃತ್ತರಾಗಿದ್ದರು. ಆ ಮೂಲಕ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 31ಕ್ಕೆ ಕುಸಿದಿತ್ತು. ಇದೀಗ ಮತ್ತೆ ನಾಲ್ಕು ಮಂದಿ ನ್ಯಾಯಾಧೀಶರ ನೇಮಕದ ಮೂಲಕ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 34ಕ್ಕೆ ಏರಿಕೆಯಾದಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com