ಸೆ.1ರಿಂದ ' ಏಕ ರಾಷ್ಟ್ರ ಏಕ ಸಂವಿಧಾನ 'ಅಭಿಯಾನಕ್ಕೆ ಬಿಜೆಪಿ ಚಾಲನೆ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1ರಿಂದ ಏಕ ರಾಷ್ಟ್ರ ಏಕ ಸಂವಿಧಾನ ರಾಷ್ಟ್ರೀಯ ಏಕತಾ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ತಿಳಿಸಿದ್ದಾರೆ.
ಮುರಳೀಧರ್ ರಾವ್
ಮುರಳೀಧರ್ ರಾವ್

ನವದೆಹಲಿ:  ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1ರಿಂದ ಏಕ ರಾಷ್ಟ್ರ ಏಕ ಸಂವಿಧಾನ ರಾಷ್ಟ್ರೀಯ ಏಕತಾ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ತಿಳಿಸಿದ್ದಾರೆ.

ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನದಲ್ಲಿ ಸಂವಿಧಾನದ 370ನೇ ವಿಧಿ ರದ್ದತಿ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ, ಪ್ರತಿಪಕ್ಷಗಳ ವಿರೋಧ, ವಾದ, ನಿಲುವುಗಳ  ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ಸುದ್ದಿಗಾರರಿಗೆ ಹೇಳಿದ್ದಾರೆ.

ಪಕ್ಷದ ಹಿರಿಯ ನಾಯಕರು ದೇಶಾದ್ಯಂತ ಸುಮಾರು 2 ಸಾವಿರ ಜನರನ್ನು ಭೇಟಿಯಾಗಲಿದ್ದು, ಸಂವಿಧಾನದ 370ನೇ  ವಿಧಿ ರದ್ದತಿ ಬಗ್ಗೆ ವಿವರಣೆ ನೀಡಲಾಗುವುದು ಎಂದರು. ಈ ಅಭಿಪ್ರಾಯ ಸಂಗ್ರಹಕರು ತಮ್ಮ ಕ್ಷೇತ್ರದಲ್ಲಿನ ಜನರಿಗೆ ಸಂವಿಧಾನದ 370ನೇ ವಿಧಿ ರದ್ದತಿ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್, ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ಕೇಂದ್ರ  ಸಚಿವರು ಹಾಗೂ ರಾಜ್ಯಗಳ ಮುಖ್ಯಮಂತ್ರಿಗಳು ವಿವಿಧ ಪ್ರದೇಶಗಳಿಗೆ ತೆರಳಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುರಳೀಧರ್ ರಾವ್ ಹೇಳಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com