ರಾಸಾಯನಿಕ ಕಾರ್ಖಾನೆಯಲ್ಲಿ ಸಿಲೆಂಡರ್ ಸ್ಪೋಟ,10 ಕಾರ್ಮಿಕರು ಸಾವು,40 ಜನರಿಗೆ ಗಾಯ

ಮಹಾರಾಷ್ಟ್ರದ  ಧುಲೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕನಿಷ್ಟ 10  ಮಂದಿ ಸಾವನ್ನಪ್ಪಿ 40 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ರಾಸಾಯನಿಕ ಕಾರ್ಖಾನೆಯಲ್ಲಿ ಸಿಲೆಂಡರ್ ಸ್ಪೋಟ,10 ಕಾರ್ಮಿಕರು ಸಾವು,40 ಜನರಿಗೆ ಗಾಯ
ರಾಸಾಯನಿಕ ಕಾರ್ಖಾನೆಯಲ್ಲಿ ಸಿಲೆಂಡರ್ ಸ್ಪೋಟ,10 ಕಾರ್ಮಿಕರು ಸಾವು,40 ಜನರಿಗೆ ಗಾಯ

ಮುಂಬೈ: ಮಹಾರಾಷ್ಟ್ರದ  ಧುಲೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕನಿಷ್ಟ 10  ಮಂದಿ ಸಾವನ್ನಪ್ಪಿ 40 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಬೆಳಿಗ್ಗೆ 9.45 ರ ಸುಮಾರಿಗೆ ಈ ಘಟನೆ ಸಂಭವಿಸಿದಾಗ ಶಿರ್ಪುರ ತಾಲೂಕಿನ ಘಾಡಿ ಗ್ರಾಮದಲ್ಲಿರುವ ಕಾರ್ಖಾನೆಯೊಳಗೆ ಕನಿಷ್ಠ 100 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರೆಂದು ಪೋಲೀಸರು ತಿಳಿಸಿದ್ದಾರೆ.

ಫ್ಲೆಮಾ ಫೇಸಿ ಕಾರ್ಕಾನೆಯಲ್ಲಿ ಹಲವು ಸಿಲೆಂಡರ್ ಗಳು ಸ್ಪೋಟಗೊಂಡಿದ್ದು . ಈವರೆಗೆ ಕನಿಷ್ಠ ಎಂಟು ಶವಗಳನ್ನು ಪೊಲೀಸ್ ಮತ್ತು ರಕ್ಷಣಾ ತಂಡಗಳು ವಶಪಡಿಸಿಕೊಂಡಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಶಿರ್ಪುರ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದು ಪೊಲೀಸ್, ವಿಪತ್ತು ನಿರ್ವಹಣೆ, ಅಗ್ನಿಶಾಮಕ ದಳದ ವಿವಿಧ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com