ಮಹಾರಾಷ್ಟ್ರ: ವಿಪಕ್ಷ ನಾಯಕರಾಗಿ ಫಡ್ನವೀಸ್ ಆಯ್ಕೆ

ಮಹಾರಾಷ್ಟ್ರ ವಿಧಾನಮಂಡಲದ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ಆಯ್ಕೆಯಾಗಿದ್ದಾರೆ. 

Published: 01st December 2019 01:32 PM  |   Last Updated: 01st December 2019 01:32 PM   |  A+A-


Devendra Fadnavis

ದೇವೇಂದ್ರ ಫಡ್ನವೀಸ್

Posted By : Manjula VN
Source : The New Indian Express

ಮುಂಬೈ: ಮಹಾರಾಷ್ಟ್ರ ವಿಧಾನಮಂಡಲದ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ಆಯ್ಕೆಯಾಗಿದ್ದಾರೆ. 

ವಿಧಾನಸಭೆಯ ನೂತನ ಸ್ಪೀಕರ್ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವರು ಈ ಕುರಿತು ಘೋಷಣೆ ಮಾಡಿದ್ದಾರೆ. 

ವಿಧಾನಮಂಡಲದಲ್ಲಿ ಬಿಜೆಪಿ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದು, ದೇವೇಂದ್ರ ಫಡ್ನವೀಸ್ ಅವರು ವಿರೋಧ ಪಕ್ಷದ ನಾಯಕರಾಗಿರಲಿದ್ದಾರೆಂದು ಪಟೋಲೆಯವರು ಹೇಳಿದ್ದಾರೆ.  ಪಟೋಲೆಯವರು ಘೋಷಣೆ ಮಾಡುತ್ತಿದ್ದಂತೆಯೇ ಸಿಎಂ ಉದ್ಧವ್ ಠಾಕ್ರೆ ಹಾಗೂ ಕೆಲ ಸಚಿವರು ಫಡ್ನವೀಸ್ ಅವರಿಗೆ ಶುಭಾಶಯಗಳನ್ನು ಕೋರಿದರು. 

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp