40 ಸಾವಿರ ಕೋಟಿ ಅನುದಾನ ರಕ್ಷಣೆಗೆ ಬಿಜೆಪಿ ಸರ್ಕಾರ ರಚನೆ ಹೇಳಿಕೆ: ಫಡ್ನವೀಸ್ ಹೇಳಿದ್ದೇನು?

ಕೇಂದ್ರ ಸರ್ಕಾರದ ಹಣವನ್ನು ವಾಪಸ್ ಕಳುಹಿಸಲು ದೇವೇಂದ್ರ ಫಡ್ನವಿಸ್ ಅವರನ್ನು 80 ಗಂಟೆಗಳ ಕಾಲ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು ಎಂಬ ಸಂಸದ ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಯನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿರಸ್ಕರಿಸಿದ್ದಾರೆ.
ದೇವೇಂದ್ರ ಫಡ್ನವೀಸ್
ದೇವೇಂದ್ರ ಫಡ್ನವೀಸ್

ಮುಂಬಯಿ: ಕೇಂದ್ರ ಸರ್ಕಾರದ ಹಣವನ್ನು ವಾಪಸ್ ಕಳುಹಿಸಲು ದೇವೇಂದ್ರ ಫಡ್ನವಿಸ್ ಅವರನ್ನು 80 ಗಂಟೆಗಳ ಕಾಲ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು ಎಂಬ ಸಂಸದ ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಯನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿರಸ್ಕರಿಸಿದ್ದಾರೆ.

ಈ ಸಂಬಂಧ ಪ್ರತಕ್ರಿಯಿಸಿರುವ ಅವರು, 80 ಗಂಟೆಗಳ ಕಾಲ ಮುಖ್ಯಮಂತ್ರಿಯಾಗಿದ್ದಾಗ ನಾನು ಯಾವುದೇ ಹಣಕಾಸು ನಿರ್ಧಾರವನ್ನು ಕೈಗೊಂಡಿಲ್ಲ. ಈ ಕುರಿತು ನಾನು ಗಂಭೀರವಾಗಿ ಹೇಳಲು ಬಯಸುತ್ತೇನೆ ಯಾವುದೇ ಹಣವನ್ನು ಕೇಂದ್ರ ಸರ್ಕಾರಕ್ಕೆ ಮರಳಿ ಕಳುಹಿಸಿಲ್ಲ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಣಕಾಸು ವ್ಯವಸ್ಥೆಯನ್ನು ಪರಿಶೀಲಿಸಿದರೆ ಈ ಕುರಿತು ತಿಳಿಯುತ್ತದೆ ಸ್ಪಷ್ಟಪಡಿಸಿದರು.

ಬುಲೆಟ್ ರೈಲು ಯೋಜನೆಯಲ್ಲಿ ಸಹ ಕೇಂದ್ರ ಸರ್ಕಾರ ನಿಯೋಜಿಸಿದ ಕಂಪನಿ ಕಾಮಗಾರಿ ನಡೆಸುತ್ತಿದೆ. ರಾಜ್ಯ ಸರ್ಕಾರ ಬುಲೆಟ್ ರೈಲಿಗೆ ಕೇವಲ ಭೂಮಿಯನ್ನು ಮಾತ್ರ ನೀಡುತ್ತಿದೆ. ಇದನ್ನು ಹೊರತು ಪಡಿಸಿದರೆ ಯಾವುದೇ ಹಣಕಾಸು ವ್ಯವಹಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ನಡೆದಿಲ್ಲ. ಹೀಗಿರುವಾಗ ಹಣ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಕುರಿತು ಹೇಳಿಕೆಗಳು ಸುಳ್ಳು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com