ಪ್ರಿಯಾಂಕಾ ಛೋಪ್ರಾ ಜಿಂದಾಬಾದ್: ಕಾಂಗ್ರೆಸ್ ನಾಯಕನ ಯಡವಟ್ಟು; ವಿಡಿಯೋ ವೈರಲ್

ಕಾಂಗ್ರೆಸ್ ಮುಖಂಡರೊಬ್ಬರು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬದಲು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾಗೆ ಜಿಂದಾಬಾದ್ ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್ ಗೆ ಒಳಗಾಗಿದ್ದಾರೆ.

Published: 02nd December 2019 01:54 PM  |   Last Updated: 02nd December 2019 01:54 PM   |  A+A-


Priyanka Chopra

ಪ್ರಿಯಾಂಕಾ ಛೋಪ್ರಾ

Posted By : Shilpa D
Source : ANI

ನವದೆಹಲಿ: ಸಾರ್ವಜನಿಕ ಸಮಾರಂಭವೊಂದರಲ್ಲಿ ಪಕ್ಷದ ಹೈಕಮಾಂಡ್ ಮುಖಂಡರಿಗೆ ಬಹುಪರಾಕ್ ಹಾಕುತ್ತಿದ್ದ ಕಾಂಗ್ರೆಸ್ ಮುಖಂಡರೊಬ್ಬರು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬದಲು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾಗೆ ಜಿಂದಾಬಾದ್ ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್ ಗೆ ಒಳಗಾಗಿದ್ದಾರೆ.

ಕಾಂಗ್ರೆಸ್ ಮುಖಂಡ ಸುರೇಂದ್ರ ಕುಮಾರ್ ಅವರು  ಪ್ರಿಯಾಂಕಾ ಚೋಪ್ರಾ ಮತ್ತು ಗಾಂಧಿ ಹೆಸರನ್ನು ಸೇರಿಸಿ ಹೇಳಿರುವ ಘೋಷಣೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಭೆಯಲ್ಲಿ ಕುಮಾರ್, ಸೋನಿಯಾ ಗಾಂಧಿ ಜಿಂದಾಬಾದ್, ಕಾಂಗ್ರೆಸ್ ಪಾರ್ಟಿ ಜಿಂದಾಬಾದ್, ರಾಹುಲ್ ಗಾಂಧಿ ಜಿಂದಾಬಾದ್…ಪ್ರಿಯಾಂಕಾ ಚೋಪ್ರಾ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಕೂಡಲೇ ತನ್ನ ತಪ್ಪಿನ ಅರಿವಾಗುತ್ತಿದ್ದಂತೆಯೇ…ಕ್ಷಮೆಯಾಚಿಸಿ ಪ್ರಿಯಾಂಕಾ ಗಾಂಧಿ ಜಿಂದಾಬಾದ್ ಎಂದು ಹೇಳಿರುವುದು ವಿಡಿಯೋದಲ್ಲಿದೆ. ಈ ವಿಡಿಯೋ ಶೇರ್ ಆಗುತ್ತಿದ್ದಂತೆಯೇ ನೆಟ್ಟಿಗರು ಕಾಂಗ್ರೆಸ್ ಪಕ್ಷವನ್ನು ಟ್ವೀಟರ್ ನಲ್ಲಿ ಟ್ರೋಲ್ ಮಾಡಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp