170 ಕೋಟಿ ರೂ. ದೇಣಿಗೆ ಸ್ವೀಕರಿಸಿದ ಕಾಂಗ್ರೆಸ್ ಪಕ್ಷಕ್ಕೆ ಐಟಿ ನೋಟಿಸ್

ಕಂಪನಿಯೊಂದರಿಂದ 170 ಕೋಟಿ ರೂಪಾಯಿ ದೇಣಿಗೆ ಸ್ವೀಕರಿಸಿದ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕಂಪನಿಯೊಂದರಿಂದ 170 ಕೋಟಿ ರೂಪಾಯಿ ದೇಣಿಗೆ ಸ್ವೀಕರಿಸಿದ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.

3,300 ಕೋಟಿ ರೂಪಾಯಿ ಹವಾಲ ಹಗರಣದ ತನಿಖೆಯ ಭಾಗವಾಗಿ ಐಟಿ ಅಧಿಕಾರಿಗಳು ಕಾಂಗ್ರೆಸ್ ಗೆ ನೋಟಿಸ್ ಜಾರಿ ಮಾಡಿದ್ದು, 
ಕಾಂಗ್ರೆಸ್ ಗೆ ಬಂದಿರುವ ಮೊತ್ತಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ನೀಡುವಂತೆ ಸೂಚಿಸಲಾಗಿದೆ.

ಇತ್ತೀಚೆಗೆ ದೆಹಲಿ, ಮುಂಬೈ ಹಾಗೂ ಹೈದರಾಬಾದ್ ನಲ್ಲಿ ರಾಜಕೀಯ ಪಕ್ಷ, ಸೆಲೆಬ್ರಿಟಿಗಳ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಈ ವೇಳೆ ಕಟ್ಟಡ ನಿರ್ಮಾಣ ಸಂಸ್ಥೆಯಿಂದ ಹವಾಲ ಸಂಪರ್ಕದ ಮೂಲಕ ಕಾಂಗ್ರೆಸ್ ಗೆ 170 ಕೋಟಿ ರೂ. ದೇಣಿಗೆ ರೂಪದಲ್ಲಿ ಸಂದಾಯವಾಗಿರುವುದು ಪತ್ತೆಯಾಗಿದೆ.

ಸರ್ಕಾರಿ ಯೋಜನೆಗಳ ಗುತ್ತಿಗೆ ಪಡೆದಿದ್ದ ಆ ಸಂಸ್ಥೆ ಬೋಗಸ್ ಬಿಲ್ ಗಳನ್ನು ಲಗತ್ತಿಸಿ ಈ ಮೊತ್ತವನ್ನು ತೋರಿಸಲಾಗಿದೆ ಎಂಬ ಮಾಹಿತಿಯಿದೆ. ಹೀಗಾಗಿ, ಈ ಬಗ್ಗೆ ಸ್ಪಷ್ಟನೆ ಕೋರಿ ಕಾಂಗ್ರೆಸ್ ಪಕ್ಷ ಹಾಗೂ ನಿರ್ಮಾಣ ಸಂಸ್ಥೆಗೆ ನೋಟಿಸ್ ಕಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com