ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಡಿ.16ರೊಳಗೆ ಗಲ್ಲಿಗೇರಿಸಿ: ಡಿಸಿಡಬ್ಲ್ಯೂ ಮುಖ್ಯಸ್ಥೆ

ನಿರ್ಭಯಾ ಪ್ರಕರಣಕ್ಕೆ ಸಂಬಂಧಿಸಿದ ಸಲ್ಲಿಕೆಯಾಗಿರುವ ಎಲ್ಲಾ ಕ್ಷಮಾಧಾನ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್...

Published: 05th December 2019 08:00 PM  |   Last Updated: 05th December 2019 08:00 PM   |  A+A-


Nirbhaya Gangrape Convicts

ನಿರ್ಭಯಾ ಅತ್ಯಾಚಾರಿಗಳು

Posted By : Vishwanath S
Source : UNI

ನವದೆಹಲಿ: ನಿರ್ಭಯಾ ಪ್ರಕರಣಕ್ಕೆ ಸಂಬಂಧಿಸಿದ ಸಲ್ಲಿಕೆಯಾಗಿರುವ ಎಲ್ಲಾ ಕ್ಷಮಾಧಾನ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್, ಗುರುವಾರ ಪ್ರಕರಣದ ಎಲ್ಲಾ ಅಪರಾಧಿಗಳನ್ನು ಡಿಸೆಂಬರ್ 16ರೊಳಗೆ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ರಾಷ್ಟ್ರಪತಿಯವರಿಗೆ ಪತ್ರ ಬರೆದಿರುವ ಅವರು, ಆರು ತಿಂಗಳಲ್ಲಿ ಎಲ್ಲಾ ಅತ್ಯಾಚಾರಿಗಳಿಗೆ ಆರು ತಿಂಗಳೊಳಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನುಗಳನ್ನು ತಕ್ಷಣವೇ ಜಾರಿಗೆ ತರಬೇಕು. ಮತ್ತು ಅಗತ್ಯವಿರುವ ಎಲ್ಲಾ ಕಾರ್ಯವಿಧಾನಗಳನ್ನು ಪ್ರಾರಂಭಿಸಬೇಕು ಎಂದು ಮನವಿ ಮಾಡಿದ್ದಾರೆ.

ನಿರ್ಭಯಾ ಅಪರಾಧಿಗಳನ್ನು ತಕ್ಷಣ ಗಲ್ಲಿಗೇರಿಸುವುದನ್ನು ಖಾತ್ರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅವರು ತಮ್ಮ ಪತ್ರದಲ್ಲಿ ಕೋರಿದ್ದಾರೆ, ದೆಹಲಿಯಲ್ಲಿ ಹದಿಮೂರು ವರ್ಷಗಳಿಂದ ಸುಮಾರು 66000 ಪೊಲೀಸ್ ಸಿಬ್ಬಂದಿ ಕೊರತೆ ಇದೆ. ಆದಷ್ಟು ಬೇಗ ಈ ಹುದ್ದೆಗಳನ್ನು ಭರ್ತಿ ಮಾಡಬೇಕು ಅವರು ಮನವಿ ಮಾಡಿದರು.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp